ನವದೆಹಲಿ: 3 ವರ್ಷಗಳ ಅವಧಿಗೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (SEBI) ಮುಖ್ಯಸ್ಥರಾಗಿ ತುಹಿನ್ ಕಾಂತ ಪಾಂಡೆ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಸಂಪುಟದ ನೇಮಕಾತಿ ಸಮಿತಿಯ ಅನುಮೋದನೆಯ ನಂತರ ಹಣಕಾಸು ಕಾರ್ಯದರ್ಶೀ ಪಾಂಡೆ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಅದೇಶ ಹೊರಡಿಸಿದೆ.
ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ ಹಾಲಿ ಮುಖ್ಯಸ್ಥರಾಗಿರುವ ಮಾಧಬಿ ಪುರಿ ಬುಚ್ ಅವರ ಅಧಿಕಾರವದಿ ಮಾ.1ರಂದು ಕೊನೆಗೊಳ್ಳಲಿದೆ. ಇವರು 2022ರ ಮಾ.2ರಂದು ಸೆಬಿಯ ಮೊದಲ ಮಹಿಳಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಪಾಂಡೆ ಅವರು ಹಣಕಾಸು ಸಚಿವಾಲಯದ ಅಡಿಯಲ್ಲಿರುವ ಸಾರ್ವಜನಿಕ ಉದ್ಯಮಗಳ ಇಲಾಖೆ(DPE), ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ (DIPAM)ಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ಹಣಕಾಸು ಕಾರ್ಯದರ್ಶಿಯಾಗುವ ಮೊದಲು ತುಹಿನ್ ಪಾಂಡೆ ಅವರು ಅನೇಖ ಇಲಾಖೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು. 2025ರ ಆರಂಭದಲ್ಲಿ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…