ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆಗೆ ಟಿವಿಕೆ ಟಾಂಗ್ ಕೊಟ್ಟಿದೆ.
ತಮಿಳುನಾಡಿನಲ್ಲಿ ಟಿವಿಕೆ 58ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಡಿಎಂಕೆ 47ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಐಎಡಿಎಂಕೆ 29ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಈ ಮೂಲಕ ದಳಪತಿ ವಿಜಯ್ ನೇತೃತ್ವವ ಟಿವಿಕೆ ಪಕ್ಷದ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯುವುದು ಪಕ್ಕಾ ಎನ್ನಲಾಗುತ್ತಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಬಹುಮತ ಯಾರಿಗೆ ಸಿಗಲಿದೆ ಎಂದು ಗೊತ್ತಾಗಲಿದೆ.




