ದೇಶ- ವಿದೇಶ

ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌: ಏನದು ಗೊತ್ತಾ?

ತಿರುವನಂತಪುರಂ: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣ ಸಂಬಂಧ ಕೇರಳದ ಕಮ್ಯುನಿಸ್ಟ್ ಪಕ್ಷದ ಸಂಸದರೊಬ್ಬರ ಹೆಸರು ತಳಕು ಹಾಕಿಕೊಂಡಿದೆ.

ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸದಸ್ಯ ಸಂತೋಷ್‍ಕುಮಾರ್ ಅವರೇ ತಲೆಬುರುಡೆಯನ್ನು ಪ್ರಕರಣದ ಪ್ರಮುಖ ಆರೋಪಿ ಪ್ರಸ್ತುತ ಎಸ್‍ಐಟಿ ವಶದಲ್ಲಿರುವ ಚಿನ್ನಯ್ಯ ಅವರಿಗೆ ತಂದುಕೊಟ್ಟಿದ್ದರು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್.ಟಿ ಅವರು ತಿರುವಂತನಪುರಕ್ಕೆ ತೆರಳಿ ರಾಜ್ಯಸಭಾ ಸದಸ್ಯರೂ ಆಗಿರುವ ಸಂತೋಷ್‍ಕುಮಾರ್ ಅವರನ್ನು ಭೇಟಿಯಾಗಿ ತಲೆಬುರುಡೆ ಹಾಗ ಪ್ರಕರಣದ ಬಗ್ಗೆ ಯಾವ ಯಾವ ತಂತ್ರಗಳನ್ನು ರೂಪಿಸಬೇಕು ಎಂಬುದರ ಬಗ್ಗೆ ರಹಸ್ಯ ಸ್ಥಳವೊಂದರಲ್ಲಿ ಚರ್ಚೆ ನಡೆಸಿದ್ದರು.

ಇದನ್ನು ಓದಿ:ಧರ್ಮಸ್ಥಳ ಪ್ರಕರಣ : ಮಹಿಳಾ ಸಂಘಟನೆಗಳಿಂದ ಸೋನಿಯಾಗೆ ಪತ್ರ

ಎಸ್‍ಐಟಿ ವಶದಲ್ಲಿರುವ ಚಿನ್ನಯ್ಯ ಹಾಗೂ ವಿಚಾರಣೆಗೆ ಹಾಜರಾಗಿದ್ದ ಗಿರೀಶ್ ಮಟ್ಟಣ್ಣನವರ್, ಜಯಂತ್, ಮಹೇಶ್ ಶೆಟ್ಟಿ ತಿಮರೋಡಿ ಅವರ ವಿಚಾರಣೆ ವೇಳೆ ಈ ಪ್ರಕರಣದ ಮಾಸ್ಟರ್ ಮೈಂಡ್ ಸಂತೋಷ್‍ಕುಮಾರ್ ಎಂಬುದನ್ನು ಬಹಿರಂಗಪಡಿಸಿದ್ದಾರೆ.

ದೆಹಲಿಗೂ ತೆರಳಿದ್ದ ಈ ತಂಡವು ಸಂಸದರನ್ನು ಭೇಟಿಯಾಗಿ ಧರ್ಮಸ್ಥಳದಲ್ಲಿ ಕಳೆದ ಹಲವಾರು ವರ್ಷದಿಂದ ಶವಗಳನ್ನು ಹೂತು ಹಾಕಿದ್ದೇನೆ. ಈಗ ನನಗೆ ಇದರ ಪಾಪಪ್ರಜ್ಞೆ ಕಾಡುತ್ತಿದೆ. ಪೊಲೀಸರು ತನಿಖೆ ನಡೆಸಿದರೆ ಎಲ್ಲವನ್ನು ಬಾಯಿ ಬಿಡುವುದಾಗಿ ಹೇಳುವಂತೆ ಚಿನ್ನಯ್ಯನ ತಲೆಗೆ ತುಂಬಿದ್ದು ಈ ತಂಡ ಎಂಬುದು ಗೊತ್ತಾಗಿದೆ.

ಇದೀಗ ಎಸ್‍ಐಟಿ ಪ್ರಕರಣದ ಮಾಸ್ಟರ್ ಮೈಂಡ್ ಎಂದೇ ಆರೋಪಿಸಿರುವ ರಾಜ್ಯಸಭಾ ಸದಸ್ಯನಿಗೆ ನೋಟಿಸ್ ನೀಡಲು ಸಿದ್ದತೆ ನಡೆಸಿದೆ. ಒಂದು ವೇಳೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದರೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಳ್ಳುವುದರಲ್ಲಿ ಯಾವ ಸಂಶಯವೂ ಇಲ್ಲ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago