ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಲಾಮ್ ಜಿಲ್ಲೆಯಲ್ಲಿ ಕಳೆದ ಶನಿವಾರ ನಡೆದ ಪತ್ಯೇಕ ಎನ್ ಕೌಂಟರ್ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಎರಡು ಪತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ನಿರ್ದಿಷ್ಟ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಿತು. ಈ ವೇಳೆ ಒಂದರ ಹಿಂದೆ ಎಂಬಂತೆ ಎನ್ ಕೌಂಟರ್ ಗಳು ನಡೆದವು.
ಸಿಆರ್ ಪಿಎಫ್ , ಸೇನೆ ಮತ್ತು ಸ್ಥಳೀಯ ಪೊಲೀಸರ ಜಂಟಿ ಪಡೆಗಳು ದಾಳಿ ನಡೆಸಿತು. ದಾಳಿಯ ಸಮಯದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಯೋಧರೊಬ್ಬರು ಹುತಾತ್ಮರಾದರು . ಇನ್ನು ಕುಲ್ಗಾಮ್ ನ ಫ್ರಿಸಾಲ್ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್ ಕೌಂಟರ್ ನಲ್ಲಿ ನಾಲ್ವರು ಭಯೋತ್ಪಾದಕರು ಬಲಿಯಾಗಿದ್ದರೆ, ಕಾರ್ಯಾಚರಣೆಯ ವೇಳೆ ಓರ್ವ ಸೇನಾ ಯೋಧ ಹುತಾತ್ಮರಾಗಿದ್ದಾರೆ. ಅಲ್ಲದೆ ಮತ್ತೊಬ್ಬರು ಗಾಯಗೊಂಡಿದ್ದಾರೆ. ಇನ್ನು ಗುಂಡಿನ ದಾಳಿಯ ನಡುವೆ ಭಯೋತ್ಪಾದಕರ ಮೃತದೇಹಗಳನ್ನು ಹೊರಗೆತೆಗೆಯಲು ಸಾಧ್ಯವಾಗಲಿಲ್ಲ. ಎನ್ ಕೌಂಟರ್ ಸ್ಥಳದಲ್ಲಿ ಇನ್ನೂ ಇಬ್ಬರು ಉಗ್ರರು ಇರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.