ದೇಶ- ವಿದೇಶ

ಜಮ್ಮು -ಕಾಶ್ಮೀರದಲ್ಲಿ ಎನ್ ಕೌಂಟರ್ ಗೆ ಇಬ್ಬರು ಯೋಧರು ಹುತಾತ್ಮ :. ನಾಲ್ವರು ಭಯೋತ್ಪಾದಕರು ಬಲಿ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಲಾಮ್‌ ಜಿಲ್ಲೆಯಲ್ಲಿ ಕಳೆದ ಶನಿವಾರ ನಡೆದ ಪತ್ಯೇಕ ಎನ್‌ ಕೌಂಟರ್‌ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಎರಡು ಪತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ನಿರ್ದಿಷ್ಟ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಿತು. ಈ ವೇಳೆ ಒಂದರ ಹಿಂದೆ ಎಂಬಂತೆ ಎನ್ ಕೌಂಟರ್‌ ಗಳು ನಡೆದವು.

ಸಿಆರ್‌ ಪಿಎಫ್‌ , ಸೇನೆ ಮತ್ತು ಸ್ಥಳೀಯ ಪೊಲೀಸರ ಜಂಟಿ ಪಡೆಗಳು ದಾಳಿ ನಡೆಸಿತು. ದಾಳಿಯ ಸಮಯದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಯೋಧರೊಬ್ಬರು ಹುತಾತ್ಮರಾದರು . ಇನ್ನು ಕುಲ್ಗಾಮ್‌ ನ ಫ್ರಿಸಾಲ್‌ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್‌ ಕೌಂಟರ್‌ ನಲ್ಲಿ ನಾಲ್ವರು ಭಯೋತ್ಪಾದಕರು ಬಲಿಯಾಗಿದ್ದರೆ, ಕಾರ್ಯಾಚರಣೆಯ ವೇಳೆ ಓರ್ವ ಸೇನಾ ಯೋಧ ಹುತಾತ್ಮರಾಗಿದ್ದಾರೆ. ಅಲ್ಲದೆ ಮತ್ತೊಬ್ಬರು ಗಾಯಗೊಂಡಿದ್ದಾರೆ. ಇನ್ನು ಗುಂಡಿನ ದಾಳಿಯ ನಡುವೆ ಭಯೋತ್ಪಾದಕರ ಮೃತದೇಹಗಳನ್ನು ಹೊರಗೆತೆಗೆಯಲು ಸಾಧ್ಯವಾಗಲಿಲ್ಲ.  ಎನ್‌ ಕೌಂಟರ್‌ ಸ್ಥಳದಲ್ಲಿ ಇನ್ನೂ ಇಬ್ಬರು ಉಗ್ರರು ಇರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago