ಜಮ್ಮ-ಕಾಶ್ಮೀರ: ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳುತ್ತಿದ್ದ ಕೆಲವು ಭಯೋತ್ಪಾದಕರ ವಿರುದ್ಧ ಗುಂಡಿನ ದಾಳಿ ನಡೆಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್‌ನ ನಿಯಂತ್ರಣ ರೇಖೆ ಬಳಿ ಭದ್ರತಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಆದರೆ ಅವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಈ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ಮತ್ತೊಂದೆಡೆ, ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಮತ್ತೊಂದು ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಜಿಲ್ಲೆಯ ಕಸ್ತಿಗಢ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ.
ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರರ ಮೇಲೆ ಭಾರತೀಯ ಸೇನೆ ಹದ್ದಿನ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಗಡಿ ಒಳಗಡೆ ಭಯೋತ್ಪಾದಕರು ನುಸುಳದಂತೆ ಭಾರೀ ಭದ್ರತೆ ಏರ್ಪಡಿಸಲಾಗಿದೆ.