ದೇಶ- ವಿದೇಶ

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ: ಇಬ್ಬರು ಭಯೋತ್ಪಾಕದರ ಹತ್ಯೆ

ಜಮ್ಮ-ಕಾಶ್ಮೀರ: ಕುಪ್ವಾರ ಜಿಲ್ಲೆಯ ಕೆರಾನ್‌ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳುತ್ತಿದ್ದ ಕೆಲವು ಭಯೋತ್ಪಾದಕರ ವಿರುದ್ಧ ಗುಂಡಿನ ದಾಳಿ ನಡೆಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್‌ ಸೆಕ್ಟರ್‌ನ ನಿಯಂತ್ರಣ ರೇಖೆ ಬಳಿ ಭದ್ರತಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಆದರೆ ಅವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಈ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ಮತ್ತೊಂದೆಡೆ, ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಮತ್ತೊಂದು ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಜಿಲ್ಲೆಯ ಕಸ್ತಿಗಢ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರರ ಮೇಲೆ ಭಾರತೀಯ ಸೇನೆ ಹದ್ದಿನ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಗಡಿ ಒಳಗಡೆ ಭಯೋತ್ಪಾದಕರು ನುಸುಳದಂತೆ ಭಾರೀ ಭದ್ರತೆ ಏರ್ಪಡಿಸಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

16 mins ago

ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

೫೦ ಜೆಸಿಬಿ, ೩೦ ಟಿಪ್ಪರ್‌ಗಳು, ೮ ಟ್ರಾಕ್ಟರ್‌ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…

34 mins ago

ದಕ್ಷಿಣ ಕಾಶಿಯ ಪಂಚ ಮಹಾರಥೋತ್ಸವಕ್ಕೆ ಭಾರಿ ಸಿದ್ಧತೆ

ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ  ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ…

49 mins ago

ಆಕಾಶನನ್ನು ಬಾನಿನಲ್ಲಿ ಹಾರಾಡಲು ಕಲಿಸಿದ ಮೈಸೂರಿನ ವಾಕ್- ಶ್ರವಣ ಸಂಸ್ಥೆ

ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…

4 hours ago

ವೀರಗಾಸೆಯೇ ಜೀವವಾಗಿರುವ ಕಿರಾಳು ಮಹೇಶ್

ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…

4 hours ago

ಕಾಡ ನೋಡಹೋಗಿ ಲಂಟಾನ ಕಂಡು ಬಂದೆ

ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…

4 hours ago