ಲಕ್ನೋ: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳ ನಡೆಯುವ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ.
2025ರ ಜನವರಿಯಲ್ಲಿ ಮಹಾಕುಂಭಮೇಳ ನಡೆಯಲಿದ್ದು, ಅದಕ್ಕೂ ಮೊದಲು ಯುಪಿ ಸರ್ಕಾರ ಈ ಘೋಷಣೆ ಮಾಡಿದೆ.
ಹೊಸ ಜಿಲ್ಲೆಯನ್ನು ಮಹಾ ಕುಂಭಮೇಳ ಜಿಲ್ಲೆ ಎಂದು ಕರೆದಿರುವುದು ವಿಶೇಷವೆನಿಸಿದೆ. ಮುಂದಿನ ವರ್ಷ ನಡೆಯುವ ಮಹಾ ಕುಂಭಮೇಳವನ್ನು ಸಮರ್ಥವಾಗಿ ನಿರ್ವಹಿಸುವ ಸಲುವಾಗಿ ಈ ನಿರ್ಧಾರ ಮಾಡಲಾಗಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಸಿಎಂ ಯೋಗಿ ಆದಿತ್ಯನಾಥ್ ಅವರು, ಕುಂಭಮೇಳಕ್ಕೆ ಬರುವ ಸಾರ್ವಜನಿಕರಿಗೆ ಅನುಭವ ಹೆಚ್ಚಿಸುವ ಮತ್ತು ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸರ್ಕಾರದ ಬದ್ಧತೆಯನ್ನು ಈ ಕ್ರಮವು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ.
ಮಹಾಕುಂಭಮೇಳ ಜಿಲ್ಲೆಯು ಸಂಪೂರ್ಣ ಮೆರವಣಿಗೆ ಮತ್ತು ನಾಲ್ಕು ತಹಸಿಲ್‌ಗಳ ಸದರ್, ಸೊರಾನ್, ಫುಲ್‌ಪುರ್ ಮತ್ತು ಕರ್ಚನಾಗಳ 67 ಗ್ರಾಮಗಳನ್ನು ಒಳಗೊಂಡಿದೆ.
ಇನ್ನು 12 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳವು ಜನವರಿ.13ರಿಂದ ಫೆಬ್ರವರಿ.26ರವರೆಗೆ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…