Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

Udupi | ಮೋದಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನ

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು.

ಮೋದಿಯವರ ಕೈಗೆ ಕಂಕಣವನ್ನು ಕಟ್ಟಿ, ಶ್ರೀಕೃಷ್ಣ ದೇವರ ಚಿತ್ರವನ್ನು ನೀಡಿ ರಾಷ್ಟ್ರ ರಕ್ಷಣೆಯ ದೀಕ್ಷೆಯನ್ನು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನೀಡಿದರು. ವಿಶಿಷ್ಟವಾಗಿ ಅಲಂಕೃತವಾದ ನವಿಲುಗರಿ ಇರುವ ಕಿರೀಟವನ್ನು ಮೋದಿಯವರಿಗೆ ಶ್ರೀಪಾದರು ಧರಿಸಿ, ಬಿರುದನ್ನು ನೀಡಿದರು.

ನರೇಂದ್ರ ಎಂದರೆ ಅರ್ಜುನ ಎಂದರ್ಥ. ಶ್ರೀ ಕೃಷ್ಣನ ಬಳಿ ಪ್ರಧಾನಿ ಮೋದಿ ಅರ್ಜುನನಾಗಿ ಬಂದಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮನನ್ನು ಸ್ಥಾಪಿಸಿ ಶ್ರೀ ಕೃಷ್ಣನ ಕ್ಷೇತ್ರಕ್ಕೆ ಮೋದಿ ಆಗಮಿಸಿದ್ದಾರೆ. 14 ವರ್ಷದ ಮೇಲೆ ಶ್ರೀರಾಮ ಅಯೋಧ್ಯೆಗೆ ಮರಳಿದ್ದ. ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ 14 ವರ್ಷದ ಹಿಂದೆ ನರೇಂದ್ರ ಮೋದಿಯವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬಂದಿದ್ದರು. ಆಗಲೂ ನಮ್ಮ ಪರ್ಯಾಯ ನಡೆಯುತ್ತಿತ್ತು. ನಮ್ಮದು ಇಂದ್ರ ಪರ್ಯಾಯ, ನಾನು ಸುಗುಣೇಂದ್ರ ಅವರು ನರೇಂದ್ರ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

ಇದನ್ನು ಓದಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಪ್ರಧಾನಿ ಮೋದಿ : ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿ

ಲಕ್ಷ ಕಂಠ ಗೀತಾ ಕಾರ್ಯಕ್ರಮದ ಅಂಗವಾಗಿ ಭಗವದ್ಗೀತೆಯ 15ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಸಾಮೂಹಿಕವಾಗಿ ಪಠಣ ಮಾಡಲಾಯಿತು. ಬಳಿಕ ಮೋದಿ ಅವರು, ‘ಎಲ್ಲರಿಗೂ ನಮಸ್ಕಾರ..` ಎಂದು ಕನ್ನಡದಲ್ಲಿ ಮಾತು ಆರಂಭಿಸಿ, ಕನಕದಾಸರಿಗೆ ನಮಿಸುವ ಪುಣ್ಯ ನನಗೆ ಸಿಕ್ಕಿದೆ. ನನ್ನಂತ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಕೃಷ್ಣ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಭಗವಾನ್ ಕೃಷ್ಣನ ಪ್ರೇರಣೆಯಿಂದಲೇ ಕೆಲವೊಂದು ಯೋಜನೆಗಳನ್ನ ಮಾಡಲಾಗಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದರು. ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದರು. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನವನ್ನು ಮೋದಿ ಪಡೆದರು. ಮಠದಲ್ಲಿ ಈ ಸಂದರ್ಭದಲ್ಲಿ ಇದ್ದ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪುತ್ತಿಗೆ ಸುಶ್ರೀಂದ್ರ ತೀರ್ಥ ಸ್ವಾಮೀಜಿ, ಶಿರೂರು ವೇದವರ್ಧನ ತೀರ್ಥ ಸ್ವಾಮೀಜಿ, ಕುಕ್ಕೆ ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಮೋದಿಯವರು ಮಾತನಾಡಿಸಿದರು.

Tags:
error: Content is protected !!