ಚೆನ್ನೈ: ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಗದ್ದಲದ ನಡುವೆಯೇ ತಮಿಳುನಾಡು ವಿಧಾನಸಭೆ ಇಂದು(ಜೂ.28) ದೃಢ ನಿಲುವು ತಳೆದಿದ್ದು, ನಿಟ್ ಪರೀಕ್ಷೆಯನ್ನು ರದ್ದುಪಡಿಸಬೇಕು ಮತ್ತು ಪ್ಲಸ್-2 (12 ನೇ ತರಗತಿ) ಅಂಕಗಳ ಆಧಾರದ ಮೇಲೆ ರಾಜ್ಯ ಸರ್ಕಾರಗಳು ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ನಡೆಸುವ ಹಿಂದಿನ ವ್ಯವಸ್ಥೆಯನ್ನು ಮರುಸ್ಥಾಪಿಸಬೇಕು ಎಂದು ತಮಿಳುನಾಡು ವಿಧಾನಸಭೆಯು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.
ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಸರ್ಕಾರ ಈ ನಿರ್ಣಯವನ್ನು ಮಂಡಿಸಿದ್ದು, ಈ ವೇಳೆ ಬಿಜೆಪಿಯ ಶಾಸಕರು ಸಭಾತ್ಯಾಗ ನಡೆಸಿದರೆ, ಹಲವಾರು ಪ್ರದೇಶಿಕ ಪಕ್ಷಗಳು ನಿರ್ಣಯವನ್ನು ಬೆಂಬಲಿಸಿದವು.
ಹಲವು ವರ್ಷಗಳಿಂದ ತಮಿಳುನಾಡು ಸರ್ಕಾರಗಳು ಹಾಗೂ ಇಲ್ಲಿನ ಸಾರ್ವಜನಿಕರು ನೀಟ್ ವಿರುದ್ಧ ಹೋರಾಟವನ್ನು ನಡೆಸುತ್ತಿದ್ದಾರೆ. ನೀಟ್ ಪರೀಕ್ಷೆಯ ಸಮಸ್ಯೆಗಳನ್ನು ಮನಗಂಡಿರುವ ವಿವಿಧ ರಾಜ್ಯಗಳಲ್ಲಿ ನೀಟ್ ವಿರೋಧವು ಬಲಗೊಳ್ಳುತ್ತಿದೆ ಎಂದು ಸ್ಟಾಲಿನ್ ಹೇಳಿದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…