Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

UGC NET 2024 : ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್‌ ಪರೀಕ್ಷೆ ರದ್ದು!

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆ ನಡೆಸಿದ ಮರುದಿನವೇ ಯುಜಿಸಿ-ನೆಟ್‌ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ಅಕ್ರಮದ ಶಂಕೆ ವ್ಯಕ್ತಿಪಡಿಸಿ ಈ ಮಹತ್ವದ ನಿರ್ಧಾರ ತೆಗೆದುಕೊಂಡು, ಮರು ಪರೀಕ್ಷೆಗೆ ಆದೇಶಿಸಿದೆ.

ಕೇಂದ್ರ ಸರ್ಕಾರ ಯುಜಿಸಿ ನೆಟ್‌ ಅಕ್ರಮದ ಬಗ್ಗೆ ಸಿಬಿಐಗೆ ವಹಿಸಿದ್ದು, ಮರು ಮರು ಪರೀಕ್ಷೆಯ ದಿನಾಂಕವನ್ನು ಶೀಘ್ರವೆ ಪ್ರಕಟಿಸಲಾಗುವುದು ಎಂದು ಯುಜಿಸಿ ತಿಳಿಸಿದೆ.

ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ, ಜೂನಿಯರ್‌ ಸಂಶೋಧನಾ ಪೇಲೊಶಿಪ್ ಹಾಗೂ ಪಿಎಚ್‌ಡಿ ಪದವಿಗೆ ಅರ್ಹತೆ ನಿರ್ಧರಿಸಲು ಜೂನ್‌ 18 ರಂದು  ನಡೆದ ಈ ಪರೀಕ್ಷೆಯಲ್ಲಿ ಸುಮಾರು 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು.

ಭಾರತೀಯ ಸೈಬರ್‌ ಕ್ರೈಮ್‌ ಕೋ ಆರ್ಡಿನೇಶನ್‌ ಸೆಂಟರ್‌ನ ರಾಷ್ಟ್ರೀಯ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯೂನಿಟ್‌ನಿಂದ ಪರೀಕ್ಷೆಯಲ್ಲಿ ಅಕ್ರಮ ನಡೆದಿರಬಹುದು ಎಂಬ ಮಾಹಿತಿಯನ್ನು ಪಡೆದ ನಂತರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ.

Tags: