ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆ ನಡೆಸಿದ ಮರುದಿನವೇ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮದ ಶಂಕೆ ವ್ಯಕ್ತಿಪಡಿಸಿ ಈ ಮಹತ್ವದ ನಿರ್ಧಾರ ತೆಗೆದುಕೊಂಡು, ಮರು ಪರೀಕ್ಷೆಗೆ ಆದೇಶಿಸಿದೆ.
ಕೇಂದ್ರ ಸರ್ಕಾರ ಯುಜಿಸಿ ನೆಟ್ ಅಕ್ರಮದ ಬಗ್ಗೆ ಸಿಬಿಐಗೆ ವಹಿಸಿದ್ದು, ಮರು ಮರು ಪರೀಕ್ಷೆಯ ದಿನಾಂಕವನ್ನು ಶೀಘ್ರವೆ ಪ್ರಕಟಿಸಲಾಗುವುದು ಎಂದು ಯುಜಿಸಿ ತಿಳಿಸಿದೆ.
ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ, ಜೂನಿಯರ್ ಸಂಶೋಧನಾ ಪೇಲೊಶಿಪ್ ಹಾಗೂ ಪಿಎಚ್‌ಡಿ ಪದವಿಗೆ ಅರ್ಹತೆ ನಿರ್ಧರಿಸಲು ಜೂನ್ 18 ರಂದು ನಡೆದ ಈ ಪರೀಕ್ಷೆಯಲ್ಲಿ ಸುಮಾರು 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು.
ಭಾರತೀಯ ಸೈಬರ್ ಕ್ರೈಮ್ ಕೋ ಆರ್ಡಿನೇಶನ್ ಸೆಂಟರ್‌ನ ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯೂನಿಟ್‌ನಿಂದ ಪರೀಕ್ಷೆಯಲ್ಲಿ ಅಕ್ರಮ ನಡೆದಿರಬಹುದು ಎಂಬ ಮಾಹಿತಿಯನ್ನು ಪಡೆದ ನಂತರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…
ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…
ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…