ದೇಶ- ವಿದೇಶ

ನೇಪಾಳದಲ್ಲಿ ಭೂಕಂಪ: 6 ಮಂದಿ ಸಾವು

ಕಠ್ಮಂಡು : ನೇಪಾಳದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ 6.6 ತೀವ್ರತೆಯ ಭೂಕಂಪದಿಂದಾಗಿ 6 ಮಂದಿ ಮೃತಪಟ್ಟಿದ್ದಾರೆ. ಪಶ್ಚಿಮ ನೇಪಾಳದ ದೋತಿ ಜಿಲ್ಲೆಯಲ್ಲಿ ಹೆಚ್ಚಿನ ಅವಘಡ ಸಂಭವಿಸಿದ್ದು, ಹಲವು ಮನೆ ಮತ್ತು ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭೂಕಂಪದಿಂದಾಗಿ ಕುಸಿದ ಕಟ್ಟಡಗಳಲ್ಲಿ ಸಿಲುಕಿದ್ದವರ ಪೈಕಿ ಐವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ರಕ್ಷಣಾ ಮತ್ತು ಪರಿಹಾರ ಕಾರ್ಯಚರಣೆ ಮುಂದುವರಿದಿದೆ ಎಂದು ನೇಪಾಳದ ಗೃಹ ಸಚಿವಾಲಯದ ಅಧಿಕಾರಿ ತುಳಸಿ ರಿಜಾಲ್ ತಿಳಿಸಿದ್ದಾರೆ. 2015ರಲ್ಲಿ ನೇಪಾಳದಲ್ಲಿ ಸಂಭವಿಸಿದ್ದ ಎರಡು ಭೀಕರ ಭೂಕಂಪದಲ್ಲಿ ಸುಮಾರು 9000 ಜನರು ಮೃತಪಟ್ಟಿದ್ದರು.

andolana

Recent Posts

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

21 mins ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

51 mins ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

1 hour ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

1 hour ago

ಪೂರ್ಣ ಪ್ರಮಾಣದಲ್ಲಿ ಜಾರಿಯಾಗದ ಗ್ಯಾರಂಟಿ : ಸುಧಾಕರ್‌ ಟೀಕೆ

ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…

2 hours ago

ಮೈಸೂರು | ವಿವಿಧೆಡೆ ವಿಷ್ಣುವರ್ಧನ್‌ ಅವರ ಪುಣ್ಯ ಸ್ಮರಣೆ

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…

3 hours ago