ದೇಶ- ವಿದೇಶ

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ ಆಹಾರದ ಬೆಲೆ ತೀವ್ರ ಏರಿಕೆ ಮತ್ತು ಜೀವನ ವೆಚ್ಚ ಹೆಚ್ಚಳದ ಕುರಿತಂತೆ ವಿಶ್ವಸಂಸ್ಥೆಯು ಎಲ್ಲ ದೇಶಗಳನ್ನು ಎಚ್ಚರಿಸಿದೆ.

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ಹಾಗೂ ಇರಾನ್ನ ಪ್ರತೀಕಾರದಿಂದಾಗಿ ಈ ಪ್ರದೇಶದಲ್ಲಿ ನಡೆಯುತ್ತಿರುವ ಮಿಲಿಟರಿ ಸಂಘರ್ಷವು ವಿಶ್ವದ ಅತ್ಯಂತ ನಿರ್ಣಾಯಕ ಕಡಲ ಮಾರ್ಗಗಳಲ್ಲಿ ಒಂದಾದ ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಅಡ್ಡಿಪಡಿಸಿದೆ ಎಂದು ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ ಸಮ್ಮೇಳನದ ವರದಿಯಲ್ಲಿ ತಿಳಿಸಿದೆ.

ಈ ಜಲಮಾರ್ಗದಲ್ಲಿ ಜಾಗತಿಕ ಸಮುದ್ರ ಮಾರ್ಗದ ತೈಲ ವ್ಯಾಪಾರದ ಕಾಲು ಭಾಗದಷ್ಟು ಮತ್ತು ದ್ರವೀಕೃತ ನೈಸರ್ಗಿಕ ಅನಿಲ ಹಾಗೂ ರಸಗೊಬ್ಬರ ಗಮನಾರ್ಹ ಪ್ರಮಾಣದಲ್ಲಿ ಸರಬರಾಜಾಗುತ್ತದೆ. ಇದನ್ನು ಮುಚ್ಚುವಿಕೆಯಿಂದ ಇಂಧನ ಮಾರುಕಟ್ಟೆಗಳು, ಕಡಲ ಸಾರಿಗೆ ಮತ್ತು ಜಾಗತಿಕ ಪೂರೈಕೆ ಸರಪಳಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿ ಹೇಳಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

4 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

4 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

4 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

4 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

4 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

4 hours ago