ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕ್ಯಾನ್ಸರ್ ರೋಗಿಗಳಿಗೆ ಬಂಪರ್ ಆಫರ್ ಘೋಷಣೆ ಮಾಡಿದ್ದಾರೆ.
ಔಷಧೀಯ ಕಂಪನಿಗಳು ನಡೆಸುವ ರೋಗಿ ನೆರವು ಕಾರ್ಯಕ್ರಮದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಔಷಧಿಗಳನ್ನು ನೀಡಿದರೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ ವಿನಾಯಿತಿ ಪಡೆಯಬಹುದು.
ಹೆಚ್ಚುವರಿಯಾಗಿ 37 ಹೊಸ ಔಷಧಿಗಳು ಮತ್ತು 13 ಹೊಸ ರೋಗಿ ನೆರವು ಕಾರ್ಯಕ್ರಮಗಳನ್ನು ವಿನಾಯಿತಿ ಪಟ್ಟಿಯಲ್ಲಿ ಸೇರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕ್ಯಾನ್ಸರ್ ರೋಗಿಗಳು, ಅಪರೂಪದ ಕಾಯಿಲೆಗಳು ಮತ್ತು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಪರಿಹಾರ ಒದಗಿಸಲು 36 ಜೀವ ಉಳಿಸುವ ಔಷಧಿಗಳಿಗೆ ಮೂಲ ಕಸ್ಟಮ್ಸ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗುವುದು.
6 ಜೀವ ಉಳಿಸುವ ಔಷಧಿಗಳಿಗೆ ಕಸ್ಟಮ್ಸ್ ಸುಂಕದಲ್ಲಿ 5% ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದರು.