ದೇಶ- ವಿದೇಶ

Union Budget 2025: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಹೈಲೈಟ್ಸ್‌

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ನ ಹೈಲೈಟ್ಸ್‌ ಈ ಕೆಳಕಂಡಂತಿವೆ.

* ಕೈಗಾರಿಕೆಗಳನ್ನು ಉತ್ತೇಜಿಸಲು ರಾಷ್ಟ್ರೀಯ ಉತ್ಪಾದನಾ ಮಿಷನ್‌
* ನಗರ ಬಡವರಿಗೆ 30 ಸಾವಿರ ರೂ ಮಿತಿಯೊಂದಿಗೆ ಯುಪಿಐ ಲಿಂಕ್ಡ್‌ ಕ್ರೆಡಿಟ್‌ ಕಾರ್ಡ್‌ಗಳು
* ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತೆ 75 ಸಾವಿರ ಹೊಸ ವೈದ್ಯಕೀಯ ಸೀಟುಗಳು
* ದೇಶಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಡೇ ಕೇರ್‌ ಕ್ಯಾನ್ಸರ್‌ ಕೇಂದ್ರಗಳು
* ಜಲಜೀವನ್‌ ಮಿಷನ್‌ ಅಡಿಯಲ್ಲಿ 15 ಕೋಟಿ ಜನರಿಗೆ ಸುರಕ್ಷಿತ ಕುಡಿಯುವ ನೀರು
* ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಡಿ ಗಿಗ್‌ ಕಾರ್ಮಿಕರಿಗೆ ಆರೋಗ್ಯ ಕಾರ್ಡುಗಳು
* 8 ಕೋಟಿ ಮಕ್ಕಳು ಮತ್ತು ಒಂದು ಕೋಟಿ ಗರ್ಭಿಣಿಯರಿಗೆ ಅಂಗನವಾಡಿ 2.0
* ದೇಶಾದ್ಯಂತ 50 ಸಾವಿರ ಶಾಲೆಗಳಲ್ಲಿ ಅಟಲ್‌ ಟಿಂಕರಿಂಗ್‌ ಲ್ಯಾಬ್‌ಗಳ ಸ್ಥಾಪನೆ
* ದ್ವಿದಳ ಧಾನ್ಯಗಳ ಉತ್ಪಾದನೆಗೆ ಸ್ವಾವಲಂನೆ ಯೋಜನೆ
* ಬಿಹಾರದಲ್ಲಿ ಮುಖಾನಾ ಮಂಡಳಿ ಸ್ಥಾಪನೆ
* ಕೇಂದ್ರದಿಂದಲೇ ದ್ವಿದಳ ಧಾನ್ಯಗಳ ಖರೀದಿ
* ಹಣ್ಣು ಹಾಗೂ ತರಕಾರಿಗಳ ಉತ್ಪಾದನೆಗೆ ಹೊಸ ಯೋಜನೆ
* ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಮಿತಿಯನ್ನು 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದ್ದು, 7.7 ಕೋಟಿ ರೈತರಿಗೆ ಅನುಕೂಲವಾಗಲಿದೆ.
* ಪ್ರಧಾನಮಂತ್ರಿ ಧನ್‌ ಧಾನ್ಯ ಯೋಜನೆ ಕಾರ್ಯಕ್ರಮ ಘೋಷಣೆ
* ದೇಶದ ಹಿಂದುಳಿದ ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ
* ಎಂಎಸ್‌ಎಂಇಗಳಿಗೆ ಸಾಲಗಳು 5 ಕೋಟಿಯಿಂದ 10 ಕೋಟಿಗೆ ಏರಿಕೆ
* ಹೆಚ್ಚಿನ ಇಳುವರಿ ನೀಡುವ ಪ್ರಭೇದಗಳಿಗೆ ವಿಶೇಷ ರಾಷ್ಟ್ರೀಯ ಮಿಷನ್‌
* ರಾಜ್ಯಗಳಿಗೆ 1.5 ಲಕ್ಷ ಕೋಟಿ ರೂಗಳ ಸಾಲಗಳು
* 50 ವರ್ಷಗಳವರೆಗೆ ಬಡ್ಡಿರಹಿತ ಸಾಲಗಳು
* ಗಿರ್‌ ಕಾರ್ಮಿಕರಿಗೆ ಗುರುತಿನ ಚೀಟಿಗಳು
* 27 ವಲಯಗಳಲ್ಲಿನ ನವೋದ್ಯಮಗಳಿಗೆ ಸಾಲಕ್ಕಾಗಿ ವಿಶೇಷ ಕ್ರಮ
* ಹಿರಿಯ ನಾಗರಿಕರಿಗೆ TDS ವಿನಾಯಿತಿ ರೂ 50 ಸಾವಿರದಿಂದ ರೂ 1 ಲಕ್ಷಕ್ಕೆ ಏರಿಕೆ
* ವಿಮಾ ವಲಯದಲ್ಲಿ ಶೇ.100ರಷ್ಟು FDIಗೆ ಅವಕಾಶ

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

8 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

10 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

10 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

10 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

11 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

11 hours ago