ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್‌ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಮಂಡನೆ ಮಾಡಿದ್ದು, ಬಿಹಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದಾರೆ.
ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಬಜೆಟ್‌ನಲ್ಲಿ ಹಲವಾರು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.
ಬಿಹಾರಕ್ಕೆ ಗ್ರೀನ ಫೀಲ್ಡ್ ವಿಮಾನ ನಿಲ್ದಾಣ ಮಂಜೂರು, ಪಾಟ್ನಾ ಐಐಟಿ ವಿಸ್ತರಣೆಗೆ ಅನುದಾನ ಘೋಷಣೆಯನ್ನು ಮಾಡಲಾಗಿದೆ.
ಈ ಬಗ್ಗೆ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು, ಬಿಹಾರದಲ್ಲಿ ರಾಷ್ಟ್ರೀಯ ಆಹಾರ ತಂತ್ರಜ್ಞಾನ ಸಂಸ್ಥೆ ಸ್ಥಾಪನೆ ಮಾಡಲಾಗುವುದು. ಇದು ಪೂರ್ವ ಭಾರತದಲ್ಲಿ ಆಹಾರ ಸಂಸ್ಕರಣೆಯನ್ನು ಉತ್ತೇಜಿಸುತ್ತದೆ. ಇದರಿಂದ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.