ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ್ದು, ನಮ್ಮ ಸರ್ಕಾರ ಈ ಬಜೆಟ್‌ನಲ್ಲಿ ದೇಶದ ಕೃಷಿ, ಕೈಗಾರಿಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಂಸತ್ ಭವನದಲ್ಲಿ ಇಂದು(ಫೆಬ್ರವರಿ.1) ವಿತ್ತ ಸಚಿವೆ ಬಜೆಟ್ ಮಂಡನೆ ಮಾಡುವ ವೇಳೆ ಈ ಬಾರಿಯ
ಬಜೆಟ್ ಅನ್ನು ಯುವಜನತೆ, ದಲಿತರು, ಕೃಷಿಕರು ಹಾಗೂ ಮಹಿಳೆಯರನ್ನು ಉದ್ದೇಶವಾಗಿಟ್ಟುಕೊಂಡು ಬಜೆಟ್ ಮಂಡಿಸಲಾಗುತ್ತಿದೆ ಎಂದರು.
ದೇಶದಲ್ಲಿ, ಆತ್ಮನಿರ್ಭರ ಭಾರತದ ಮೂಲಕ ಸ್ಟಾರ್ಟ್‌ಅಪ್‌ಗಳಿಗೆ 10 ಕೋಟಿಯಿಂದ 20 ಕೋಟಿ ರೂಪಾಯಿಗಳವರೆಗೂ ಕಡಿಮೆ ಬಡ್ಡಿ ಸಾಲ ನೀಡಲಾಗುವುದು. ಮೈಕ್ರೋ ಕಂಪೆನಿಗಳಿಗೆ 5 ಲಕ್ಷ ರೂಪಾಯಿವರೆಗಿನ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲಾಗುವುದು. ಅಲ್ಲದೇ ಇಂತಹ 10 ಲಕ್ಷ ಕಾರ್ಡ್‌ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ಮುಂದಿನ ಐದು ವರ್ಷಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಆರು ಅಂಶಗಳನ್ನು ಅಂದರೆ ಕೃಷಿ, ಕೈಗಾರಿಕೆ, ಗಣಿಗಾರಿಕೆ, ಆರ್ಥಿಕತೆ, ಬಡತನ ನಿರ್ಮೂಲನೆ ಮತ್ತು ಇಂಧನಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. 60 ಸಾವಿರ ಕೋಟಿ ರಫ್ತು ವಹಿವಾಟು ಹೊಂದಿರುವ ಮೀನುಗಾರಿಕೆಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಹಾಗೂ ಲಕ್ಷ್ಯದ್ವೀಪಗಳನ್ನು ಗುರಿಯಾಗಿಟ್ಟುಕೊಂಡು ಒತ್ತು ನೀಡಲಾಗುವುದು. ಇದಕ್ಕಾಗಿ ವಿಶೇಷ ವಲಯ ನಿರ್ಮಿಸಲಾಗುವುದು. ಅಲ್ಲದೇ ಪೌಷ್ಟಿಕತೆಯಲ್ಲಿ ಅಧಿಕ ಬೇಡಿಕೆ ಇರುವ ತಾವರೆ ಬೀಜ(ಮಕಾನಾ) ಬೆಳೆಗೆ ಅಧಿಕ ಆದ್ಯತೆಡ ನೀಡಲಾಗುವುದು ಎಂದು ತಿಳಿಸಿದರು.