ದೇಶ- ವಿದೇಶ

Union Budget 2025| ದೇಶದ ಕೃಷಿ, ಕೈಗಾರಿಕೆ ಹೆಚ್ಚಿನ ಆದ್ಯತೆ: ಯುವಜನ, ಮಹಿಳೆಯರು, ಬಡವರಿಗೆ ಪ್ರಯೋಜನ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಿದ್ದು, ನಮ್ಮ ಸರ್ಕಾರ ಈ ಬಜೆಟ್‌ನಲ್ಲಿ ದೇಶದ ಕೃಷಿ, ಕೈಗಾರಿಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.1) ವಿತ್ತ ಸಚಿವೆ ಬಜೆಟ್‌ ಮಂಡನೆ ಮಾಡುವ ವೇಳೆ ಈ ಬಾರಿಯ
ಬಜೆಟ್‌ ಅನ್ನು ಯುವಜನತೆ, ದಲಿತರು, ಕೃಷಿಕರು ಹಾಗೂ ಮಹಿಳೆಯರನ್ನು ಉದ್ದೇಶವಾಗಿಟ್ಟುಕೊಂಡು ಬಜೆಟ್‌ ಮಂಡಿಸಲಾಗುತ್ತಿದೆ ಎಂದರು.

ದೇಶದಲ್ಲಿ, ಆತ್ಮನಿರ್ಭರ ಭಾರತದ ಮೂಲಕ ಸ್ಟಾರ್ಟ್‌ಅಪ್‌ಗಳಿಗೆ 10 ಕೋಟಿಯಿಂದ 20 ಕೋಟಿ ರೂಪಾಯಿಗಳವರೆಗೂ ಕಡಿಮೆ ಬಡ್ಡಿ ಸಾಲ ನೀಡಲಾಗುವುದು. ಮೈಕ್ರೋ ಕಂಪೆನಿಗಳಿಗೆ 5 ಲಕ್ಷ ರೂಪಾಯಿವರೆಗಿನ ಕ್ರೆಡಿಟ್‌ ಕಾರ್ಡ್‌ ವಿತರಣೆ ಮಾಡಲಾಗುವುದು. ಅಲ್ಲದೇ ಇಂತಹ 10 ಲಕ್ಷ ಕಾರ್ಡ್‌ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಮುಂದಿನ ಐದು ವರ್ಷಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಆರು ಅಂಶಗಳನ್ನು ಅಂದರೆ ಕೃಷಿ, ಕೈಗಾರಿಕೆ, ಗಣಿಗಾರಿಕೆ, ಆರ್ಥಿಕತೆ, ಬಡತನ ನಿರ್ಮೂಲನೆ ಮತ್ತು ಇಂಧನಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. 60 ಸಾವಿರ ಕೋಟಿ ರಫ್ತು ವಹಿವಾಟು ಹೊಂದಿರುವ ಮೀನುಗಾರಿಕೆಯಲ್ಲಿ ಅಂಡಮಾನ್‌ ಮತ್ತು ನಿಕೋಬಾರ್‌ ಹಾಗೂ ಲಕ್ಷ್ಯದ್ವೀಪಗಳನ್ನು ಗುರಿಯಾಗಿಟ್ಟುಕೊಂಡು ಒತ್ತು ನೀಡಲಾಗುವುದು. ಇದಕ್ಕಾಗಿ ವಿಶೇಷ ವಲಯ ನಿರ್ಮಿಸಲಾಗುವುದು. ಅಲ್ಲದೇ ಪೌಷ್ಟಿಕತೆಯಲ್ಲಿ ಅಧಿಕ ಬೇಡಿಕೆ ಇರುವ ತಾವರೆ ಬೀಜ(ಮಕಾನಾ) ಬೆಳೆಗೆ ಅಧಿಕ ಆದ್ಯತೆಡ ನೀಡಲಾಗುವುದು ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

29 mins ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

33 mins ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

38 mins ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

42 mins ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

11 hours ago