ನವದೆಹಲಿ: ಎನ್‌ಡಿಎ ಸರ್ಕಾರದ ಮೊದಲ ಬಜೆಟ್ ಆಗಿದ್ದು, ಪ್ರಧಾನಿ ಮೋದಿ ನೇತೃತ್ವದ ಮೂರನೇ ಬಜೆಟ್ ಮಂಡಿಸಲು ವಿಶೇಷ ಧರಿಸಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿ ಸಂಸತ್ತಿನತ್ತ ಹೆಜ್ಜೆ ಹಾಕಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ಇಂದು(ಫೆಬ್ರವರಿ.1) ಸತತ ಎಂಟನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲು ಸಜ್ಜಾಗಿದ್ದು, ಮಧುಬನಿ ಕಲೆ ಇರುವ ಸೀರೆಯನ್ನು ಧರಿಸಿ ಸಂಸತ್ ಭವನದ ಕಡೆಗೆ ಹೆಜ್ಜೆ ಹಾಕಿದ್ದಾರೆ.
ಈ ಮೂಲಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧುಬನಿ ಕಲೆ ಹಾಗೂ 2021ರಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತರಾದ ದುಲಾರಿ ದೇವಿ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಇತ್ತೀಚೆಗೆ ನಿರ್ಮಲಾ ಸೀತಾರಾಮನ್ ಅವರು, ಮಿಥಿಲಾ ಆರ್ಟ್ ಇನ್‌ಸ್ಟಿಟ್ಯೂಟ್‌ಗೆ ಹೋಗಿದ್ದಾ ದುಲಾರಿ ದೇವಿ ಅವರನ್ನು ಭೇಟಿಯಾಗಿದ್ದರು. ಅಲ್ಲದೇ ಬಿಹಾರದಲ್ಲಿ ಮಧುಬನಿ ಕಲೆಯ ಬಗ್ಗೆ ಆತ್ಮೀಯವಾಗಿ ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ದುಲಾರಿ ದೇವಿ ಅವರು ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ಅವರಿಗೆ ಮಧುಬನಿ ಕಲೆಯ ಸೀರೆಯನ್ನು ಉಡುಗೊರೆಯಾಗಿ ನೀಡಿದ್ದರು. ಅಲ್ಲದೇ ಈ ಸೀರೆಯನ್ನು ಬಜೆಟ್ ಮಂಡಿಸುವ ದಿನ ಧರಿಸಬೇಕೆಂದು ಮನವಿ ಮಾಡಿದ್ದರು. ಹೀಗಾಗಿ ಇಂದು ನಿರ್ಮಲಾ ಅವರು ಮಧುಬನಿ ಕಲೆಯ ಸೀರೆ ಧರಿಸಿದ್ದು, ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡಿಸಲಿದ್ದಾರೆ.