ದೇಶ- ವಿದೇಶ

Union Budget 2025: ವಿಶೇಷ ಸೀರೆ ಧರಿಸಿ ಸಂಸತ್ತಿನತ್ತ ಹೆಜ್ಜೆ ಹಾಕಿದ ವಿತ್ತ ಸಚಿವೆ

ನವದೆಹಲಿ: ಎನ್‌ಡಿಎ ಸರ್ಕಾರದ ಮೊದಲ ಬಜೆಟ್‌ ಆಗಿದ್ದು, ಪ್ರಧಾನಿ ಮೋದಿ ನೇತೃತ್ವದ ಮೂರನೇ ಬಜೆಟ್‌ ಮಂಡಿಸಲು ವಿಶೇಷ ಧರಿಸಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿ ಸಂಸತ್ತಿನತ್ತ ಹೆಜ್ಜೆ ಹಾಕಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌ ಅವರು ಇಂದು(ಫೆಬ್ರವರಿ.1) ಸತತ ಎಂಟನೇ ಬಾರಿಗೆ ಕೇಂದ್ರ ಬಜೆಟ್‌ ಮಂಡಿಸಲು ಸಜ್ಜಾಗಿದ್ದು, ಮಧುಬನಿ ಕಲೆ ಇರುವ ಸೀರೆಯನ್ನು ಧರಿಸಿ ಸಂಸತ್‌ ಭವನದ ಕಡೆಗೆ ಹೆಜ್ಜೆ ಹಾಕಿದ್ದಾರೆ.

ಈ ಮೂಲಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಧುಬನಿ ಕಲೆ ಹಾಗೂ 2021ರಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತರಾದ ದುಲಾರಿ ದೇವಿ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಇತ್ತೀಚೆಗೆ ನಿರ್ಮಲಾ ಸೀತಾರಾಮನ್‌ ಅವರು, ಮಿಥಿಲಾ ಆರ್ಟ್‌ ಇನ್‌ಸ್ಟಿಟ್ಯೂಟ್‌ಗೆ ಹೋಗಿದ್ದಾ ದುಲಾರಿ ದೇವಿ ಅವರನ್ನು ಭೇಟಿಯಾಗಿದ್ದರು. ಅಲ್ಲದೇ ಬಿಹಾರದಲ್ಲಿ ಮಧುಬನಿ ಕಲೆಯ ಬಗ್ಗೆ ಆತ್ಮೀಯವಾಗಿ ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ದುಲಾರಿ ದೇವಿ ಅವರು ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್‌ ಅವರಿಗೆ ಮಧುಬನಿ ಕಲೆಯ ಸೀರೆಯನ್ನು ಉಡುಗೊರೆಯಾಗಿ ನೀಡಿದ್ದರು. ಅಲ್ಲದೇ ಈ ಸೀರೆಯನ್ನು ಬಜೆಟ್‌ ಮಂಡಿಸುವ ದಿನ ಧರಿಸಬೇಕೆಂದು ಮನವಿ ಮಾಡಿದ್ದರು. ಹೀಗಾಗಿ ಇಂದು ನಿರ್ಮಲಾ ಅವರು ಮಧುಬನಿ ಕಲೆಯ ಸೀರೆ ಧರಿಸಿದ್ದು, ಕೆಲವೇ ಕ್ಷಣಗಳಲ್ಲಿ ಬಜೆಟ್‌ ಮಂಡಿಸಲಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

25 mins ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

2 hours ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago