Mysore
17
overcast clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

Union Budget 2025| ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇಶದ ಆರ್ಥಿಕತೆ: ನಿರ್ಮಲಾ ಸೀತಾರಾಮನ್‌

ನವದೆಹಲಿ: ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಲ್ಲಿ ನಮ್ಮ ಭಾರತ ದೇಶದ ಆರ್ಥಿಕತೆಯೂ ಒಂದು ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು(ಫೆಬ್ರವರಿ.1) ಸತತ ಎಂಟನೇ ಬಾರಿಗೆ ಬಜೆಟ್‌ ಮಂಡನೆ ಮಾಡಿದ್ದು, ಹೊಸ ದಾಖಲೆ ನಿರ್ಮಿಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ನಮ್ಮ ಭಾರತದ ಅಭಿವೃದ್ಧಿ ಮತ್ತು ರಚನಾತ್ಮಕ ಸುಧಾರಣೆಗಳು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿವೆ ಎಂದು ಈ ಬಾರಿಯ ಬಜೆಟ್‌ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಎನ್‌ಡಿಎ ನೇತೃತ್ವದ ಮೊದಲ ಬಜೆಟ್‌ ಆಗಿದ್ದು, ಎಲ್ಲರನ್ನು ಒಳಗೊಂಡಂತೆ ಅಭಿವೃದ್ಧಿಪಥದತ್ತ ಸಾಗುವ ಬಜೆಟ್‌ ಮಂಡಿಸುವ ಪ್ರಯತ್ನ ಮುಂದುವರೆದಿದೆ. ಅಲ್ಲದೇ ವಿಕಸಿತ ಭಾರತದ ಮೂಲಕ ಬಡತನ ನಿರ್ಮೂಲನರೆ ಭಾರತ, ಗುಣಮಟ್ಟದ ಶಿಕ್ಷಣ, ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಕೈಗೆಟುಕುವ ಸಮಗ್ರ ಆರೋಗ್ಯ ಸೇವೆಯನ್ನು ಖಾತ್ರಿಪಡಿಸುತ್ತೇವೆ. ಇನ್ನೂ ಮುಂದಿನ ಐದು ವರ್ಷಗಳಲ್ಲಿ ಬೆಳವಣೆಯನ್ನು ಉತ್ತೇಜಿಸಲು ಎದುರು ನೋಡುತ್ತಿದ್ದೇವೆ ಎಂದು ಹೇಳಿದರು.

Tags:
error: Content is protected !!