ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ ಕೇಂದ್ರ ಬಜೆಟ್ ಗುಂಡೇಟಿಗೆ ಸಣ್ಣ ಬ್ಯಾಂಡೇಜ್ ಹಾಕಿದಂತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು(ಫೆಬ್ರವರಿ.1) ಪ್ರಧಾನಿ ನರೇಂದ್ರ ಮೋದಿ ನೇತೃತದ ಕೇಂದ್ರ ಸರ್ಕಾರದಲ್ಲಿ ಮೂರನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ ಈ ಬಜೆಟ್ ಬಗ್ಗೆ ಸಂಸದ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಜಾಗತಿಕ ಅನಿಶ್ಚಿತತೆಯ ಮಧ್ಯೆ ದೇಶದ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಒಂದು ಮಾದರಿ ಬದಲಾವಣೆಯನ್ನು ತರಬೇಕಾದ ಅನಿವಾರ್ಯತೆ ಇದೆ. ಆದರೆ ಕೇಂದ್ರ ಸರ್ಕಾರದ ಪರಿಕಲ್ಪನೆಗಳು ಈ ಬಾರಿ ಬಜೆಟ್ ಮಂಡನೆಯಲ್ಲಿ ದಿವಾಳಿಯಾಗಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.