ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಯಾವ ಯಾವ ವಸ್ತುಗಳ ಬೆಲೆ ಏರಿಕೆಯಾಗಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಮಂಡಿಸಿದ್ದು, ಇದು ಅವರ ಎಂಟನೇ ಬಜೆಟ್ ಆಗಿದೆ.
ಈ ಬಾರಿಯೂ ಬಡತನ ನಿರ್ಮೂಲನೆಗೆ ಆದ್ಯತೆ ನೀಡಲಾಗಿದ್ದು, ಮಧ್ಯಮವರ್ಗ ಮತ್ತು ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. 2047ಕ್ಕೆ ಬಡತನ ಮುಕ್ತ ಭಾರತ ನಿರ್ಮಿಸುವ ಸಂಕಲ್ಪ ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿ ಬಜೆಟ್‌ನಲ್ಲಿ ಹಲವು ವಸ್ತುಗಳ ಬೆಲೆಯನ್ನು ಏರಿಕೆ ಮಾಡಲಾಗಿದೆ.
೧) ಪ್ಯಾನೆಲ್ ಡಿಸ್‌ಪ್ಲೇ ಮೇಲಿನ ಕಸ್ಟಮ್ಸ್ ಸುಂಕ ಶೇ.10ರಿಂದ ಶೇ.20ರಷ್ಟು ಹೆಚ್ಚಳ
೨) ಪ್ಲಾಸ್ಟಿಕ್ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಶೇ.25ರಷ್ಟು ಹೆಚ್ಚಳ
೩) ಟೆಲಿಕಾಂ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಶೇ.10ರಿಂದ ಶೇ.15ರಷ್ಟು ಏರಿಕೆ





