Mysore
19
scattered clouds
Light
Dark

ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ೧.೫೨ ಲಕ್ಷ ಕೋಟಿ ಘೋಷಣೆ

ನವದೆಹಲಿ ; ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ ನಲ್ಲಿ ೧.೫೨ ಲಕ್ಷ ಕೋಟಿ ರೂ ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಿಗೆ ಯೋಜನೆ ರೂಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ಅಲ್ಲದೆ ಮುಂದಿನ ಒಂದು ವರ್ಷದದಲ್ಲಿ ೧ ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು. ಸಾಮಾಜಿಕ ನ್ಯಾಯ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ವಿಕಸಿತ ಭಾರತಕ್ಕಾಗಿ ಈ ಬಜೆಟ್‌ ನಲ್ಲಿ ಆದ್ಯತೆ ನೀಡಲಾಗಿದೆ. ಸೂಕ್ಷ್ಮ ಸಣ್ಣ ಮತ್ತು ಮಾಧ್ಯಮ ಕೈಗಾರಿಕೆಗಳಿಗೆ ಪೂರವಾದ ಬಜೆಟ್‌ ಇದಾಗಿದೆ. ರೈತರಿಗೆ ನಾವು ಎಲ್ಲಾಪ್ರಮುಖ ಬೆಳೆಗಳಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದ್ದೇವೆ, ಭರವಸೆಯನ್ನು ಈಡೇರಿಸಿದ್ದೇವೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್‌ ಅನ್ನ ಯೋಜನೆಯೂ ೫ ವರ್ಷದವರೆಗೆ ಕನಿಷ್ಠ ೫೦ % ಮಾರ್ಜಿನ್‌ ವೆಚ್ಚದಲ್ಲಿ ೮೦ ಕೋಟಿ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಸಿದರು.