Mysore
26
overcast clouds

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

೫ ವರ್ಷಗಳಲ್ಲಿ ಟಾಪ್ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್ ಶಿಪ್ ಅವಕಾಶ

ನವದೆಹಲಿ : ಮುಂದಿನ ೫ ವರ್ಷಗಳಲ್ಲಿ ಟಾಪ್‌ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್‌ ಶಿಪ್‌ ಅವಕಾಶವನ್ನು ಸರ್ಕಾರ ನೀಡಲಿದೆ ಎಂದು ಸಚಿವೆ  ನಿರ್ಮಾಲಾ ಸೀತಾರಾಮನ್‌ ತಿಳಿಸಿದರು.

ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್‌ ಮಂಡಿಸಿದ ನಿರ್ಮಾಲಾ ಸೀತಾರಾಮನ್‌ , ಒಂದು ಕೋಟಿ ಯುವಕರಿಗೆ ಇಂಟರ್ನ್‌ ಶಿಪ್‌ ಅವಕಾಶವನ್ನು ಸರ್ಕಾರ ನೀಡಲಿದೆ. ಈ ಇಂಟರ್ನ್ ಶಿಪ್‌ ೧೨ ತಿಂಗಳವರೆಗೆ ಇರುತ್ತದೆ. ಯುವಕರು ವ್ಯಾಪಾರದ ನೈಜ್ಯ ವಾತಾವರಣವನ್ನು ತಿಳಿದುಕೊಳ್ಳಲು ಮತ್ತು ವಿವಿಧ ವೃತ್ತಿಗಳ ಸವಾಲುಗಳನ್ನ ಎದುರಿಸಲು ಅವಕಾಶವನ್ನು ಪಡೆಯುತ್ತಾರೆ. ಇದರ ಅಡಿಯಲ್ಲಿ ಯುವಕರಿಗೆ ಪ್ರತಿ ತಿಂಗಳು ೫೦೦೦ ರೂ ಅಷ್ಟೇ ಅಲ್ಲ ಅವರಿಗೆ ಒಟ್ಟು ೬೦೦೦ ರೂಪಾಯಿ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.

ಅಲ್ಲದೆ ಕಂಪನಿಗಳು ತಮ್ಮ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ತರಭೇತಿಯ ವೆಚ್ಚಗಳನ್ನು ಮತ್ತು ಇಂಟರ್ನ್‌ ಶಿಪ್‌ ವೆಚ್ಚದ ಶೇಕಡಾ ೧೦ ರಷ್ಟು ಭರಿಸಬೇಕಾಗುತ್ತದೆ ಎಂದು ಹೇಳಿದರು.

Tags:
error: Content is protected !!