ನವದೆಹಲಿ : ಮುಂದಿನ ೫ ವರ್ಷಗಳಲ್ಲಿ ಟಾಪ್ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್ ಶಿಪ್ ಅವಕಾಶವನ್ನು ಸರ್ಕಾರ ನೀಡಲಿದೆ ಎಂದು ಸಚಿವೆ ನಿರ್ಮಾಲಾ ಸೀತಾರಾಮನ್ ತಿಳಿಸಿದರು.
ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್ ಮಂಡಿಸಿದ ನಿರ್ಮಾಲಾ ಸೀತಾರಾಮನ್ , ಒಂದು ಕೋಟಿ ಯುವಕರಿಗೆ ಇಂಟರ್ನ್ ಶಿಪ್ ಅವಕಾಶವನ್ನು ಸರ್ಕಾರ ನೀಡಲಿದೆ. ಈ ಇಂಟರ್ನ್ ಶಿಪ್ ೧೨ ತಿಂಗಳವರೆಗೆ ಇರುತ್ತದೆ. ಯುವಕರು ವ್ಯಾಪಾರದ ನೈಜ್ಯ ವಾತಾವರಣವನ್ನು ತಿಳಿದುಕೊಳ್ಳಲು ಮತ್ತು ವಿವಿಧ ವೃತ್ತಿಗಳ ಸವಾಲುಗಳನ್ನ ಎದುರಿಸಲು ಅವಕಾಶವನ್ನು ಪಡೆಯುತ್ತಾರೆ. ಇದರ ಅಡಿಯಲ್ಲಿ ಯುವಕರಿಗೆ ಪ್ರತಿ ತಿಂಗಳು ೫೦೦೦ ರೂ ಅಷ್ಟೇ ಅಲ್ಲ ಅವರಿಗೆ ಒಟ್ಟು ೬೦೦೦ ರೂಪಾಯಿ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.
ಅಲ್ಲದೆ ಕಂಪನಿಗಳು ತಮ್ಮ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ತರಭೇತಿಯ ವೆಚ್ಚಗಳನ್ನು ಮತ್ತು ಇಂಟರ್ನ್ ಶಿಪ್ ವೆಚ್ಚದ ಶೇಕಡಾ ೧೦ ರಷ್ಟು ಭರಿಸಬೇಕಾಗುತ್ತದೆ ಎಂದು ಹೇಳಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…