ನವದೆಹಲಿ: ಜಂಟಿ ಸಂಸದೀಯ ಸಮಿತಿ ನೀಡಿದ ವರದಿ ಮೇರೆಗೆ ವಕ್ಫ್ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ.
ಇದೇ ಫೆಬ್ರವರಿ.13ರಂದು ಸಂಸತ್ತಿನಲ್ಲಿ ಮಂಡಿಸಲಾದ ಜಂಟಿ ಸಂಸದೀಯ ಸಮಿತಿ ವರಧಿ ಆಧರಿಸಿ ಫೆಬ್ರವರಿ.19ರ ಸಭೆಯಲ್ಲಿ ಸಂಪುಟ ತಿದ್ದುಪಡಿಗಳನ್ನು ಅಂಗೀಕರಿಸಿದ ಬಳಿಕ ಒಪ್ಪಿಗೆ ಸೂಚಿಸಿದೆ ಎನ್ನಲಾಗುತ್ತಿದೆ.
ಇನ್ನು ಲೋಕಸಭೆಯಲ್ಲಿ ಈ ವರ್ಷದ ಮೊದಲ ಬಜೆಟ್ ಅಧಿವೇಶನದಲ್ಲೇ ಪ್ರತಿಪಕ್ಷಗಳ ಗದ್ದಲ ಕೋಲಾಹಲದ ನಡುವೆ ವರದಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ವಿಪಕ್ಷಗಳು ಸದನದಲ್ಲಿ ಗದ್ದಲ ಕೋಲಾಹಲ ಎಬ್ಬಿಸಿದ್ದವು.
ಕಳೆದ ವಾರ ಮಸೂದೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿತ್ತು. ಈ ಮೂಲಕ ಮಾರ್ಚ್.10ರಂದು ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ವಕ್ಫ್ ಆಸ್ತಿಗಳ ನೋಂದಣಿಯನ್ನು ಸುಗಮಗೊಳಿಸುವ ಗುರಿ ಹೊಂದಿತ್ತು ಎಂದು ಹೇಳಲಾಗುತ್ತಿದೆ.





