ಶ್ರೀನಗರ: ಭಯೋತ್ಪಾದಕರ ವಿರುದ್ಧ ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಶ್ರೀನಗರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿ ಯೋಧರಿಗೆ ಕೃತಜ್ಞತೆ ಸಲ್ಲಿಸಿದರು.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಪಂಜಾಬ್‌ನ ಆದಂಪುರ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಯೋಧರಿಗೆ ಅಭಿನಂದನೆ ಸಲ್ಲಿಸಿದ್ದರು.
ಈ ಬೆನ್ನಲ್ಲೇ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಶ್ರೀನಗರಕ್ಕೆ ಭೇಟಿ ನೀಡಿ ಭಾರತೀಯ ಯೋಧರ ಪರಾಕ್ರಮವನ್ನು ಕೊಂಡಾಡಿದರು.
ಇದನ್ನೂ ಓದಿ:- ಪುಲ್ವಾಮಾದಲ್ಲಿ ಗುಂಡಿನ ಚಕಮಕಿ: ಮೂವರು ಜೈಶ್ ಉಗ್ರರ ಹತ್ಯೆ
ಬಳಿಕ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರಿಗೆ ತಕ್ಕ ಶಾಸ್ತಿ ಆಗಿದೆ. ಪಾಕ್‌ಗೆ ಉಗ್ರರಿಗೆ ಕಠಿಣ ಸಂದೇಶ ರವಾನೆಯಾಗಿದೆ. ಉಗ್ರರ ದಾಳಿಯನ್ನು ಇಡೀ ವಿಶ್ವವೇ ಖಂಡಿಸಿವೆ. ದೇಶದ ಜನರ ಪರವಾಗಿ ನಾನು ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಆಪರೇಷನ್ ಸಿಂಧೂರ ನಮ್ಮೆಲ್ಲರ ಪ್ರತಿಜ್ಞೆ. ಅದು ಕೇವಲ ಹೆಸರಲ್ಲ. ಅದು ಎಚ್ಚರಿಕೆಯ ಸಂದೇಶ. ಭಯೋತ್ಪಾದಕರಿಗೆ ನಮ್ಮ ಸೇನೆ ತಕ್ಕ ಪಾಠ ಕಲಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.





