hd kumarsw̧amy
ಹೊಸದಿಲ್ಲಿ : ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ ಸುಲಭಗೊಳಿಸುವುದು ಮತ್ತು ಆತ್ಮನಿರ್ಭರಭಾರತ್ ಅನ್ನು ಬಲಪಡಿಸುವ ಒಂದು ಪರಿವರ್ತನಾತ್ಮಕ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ:ರಾಜ್ಯದ ಎಲ್ಲಾ ದೇವಾಲಯಗಳು ಸುರಕ್ಷಿತವಾಗಿದೆ: ಸಚಿವ ರಾಮಲಿಂಗಾರೆಡ್ಡಿ
ಹೊಸ ಸುಧಾರಣೆಯೊಂದಿಗೆ ಜಿಎಸ್‌ಟಿ ಈಗ ಕೇವಲ ಎರಡು ಸ್ಲ್ಯಾಬ್‌ಗಳನ್ನು ಹೊಂದಿದ್ದು, ಅದು 5% ಮತ್ತು 18% ಆಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟುಕುವಂತಾಗುತ್ತವೆ. ಜತೆಗೆ, ಉದ್ಯಮಗಳು ಹಾಗೂ ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆ (MSME) ಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ವ್ಯವಸ್ಥೆಯನ್ನು ಸರಳಗೊಳಿಸಿ ಮತ್ತಷ್ಟು ಸುಲಭಗೊಳಿಸುವ ಮತ್ತು ಭಾರತದಾದ್ಯಂತ ಪ್ರತೀ ಮನೆಗೂ ಸಂತೋಷ ಉಂಟು ಮಾಡುವ ನೈಜ ಜನಕೇಂದ್ರಿತ ಸುಧಾರಣೆ ಇದಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…