ದೇಶ- ವಿದೇಶ

ಜಿಎಸ್‌ಟಿ ಕಡಿತ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಶ್ಲಾಘನೆ

ಹೊಸದಿಲ್ಲಿ : ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ ಸುಲಭಗೊಳಿಸುವುದು ಮತ್ತು ಆತ್ಮನಿರ್ಭರಭಾರತ್ ಅನ್ನು ಬಲಪಡಿಸುವ ಒಂದು ಪರಿವರ್ತನಾತ್ಮಕ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ:ರಾಜ್ಯದ ಎಲ್ಲಾ ದೇವಾಲಯಗಳು ಸುರಕ್ಷಿತವಾಗಿದೆ: ಸಚಿವ ರಾಮಲಿಂಗಾರೆಡ್ಡಿ

ಹೊಸ ಸುಧಾರಣೆಯೊಂದಿಗೆ ಜಿಎಸ್‌ಟಿ ಈಗ ಕೇವಲ ಎರಡು ಸ್ಲ್ಯಾಬ್‌ಗಳನ್ನು ಹೊಂದಿದ್ದು, ಅದು 5% ಮತ್ತು 18% ಆಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟುಕುವಂತಾಗುತ್ತವೆ. ಜತೆಗೆ, ಉದ್ಯಮಗಳು ಹಾಗೂ ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆ (MSME) ಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ವ್ಯವಸ್ಥೆಯನ್ನು ಸರಳಗೊಳಿಸಿ ಮತ್ತಷ್ಟು ಸುಲಭಗೊಳಿಸುವ ಮತ್ತು ಭಾರತದಾದ್ಯಂತ ಪ್ರತೀ ಮನೆಗೂ ಸಂತೋಷ ಉಂಟು ಮಾಡುವ ನೈಜ ಜನಕೇಂದ್ರಿತ ಸುಧಾರಣೆ ಇದಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

14 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

15 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

16 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

22 hours ago