Mysore
23
scattered clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಉ.ಪ್ರದೇಶ | ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ; ಮೂವರ ಬಂಧನ

ಲಖನೌ : ನಿರ್ಭಯ ಪ್ರಕರಣದ ಮಾದರಿಯಲ್ಲೇ ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆಯ ಜೊತೆಗಿದ್ದ ಸ್ನೇಹಿತೆಯನ್ನು ಕೆಳಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ ಬುಲಂದ್‌ಧಹರ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆಯ ಸ್ನೇಹಿತೆಯನ್ನು ಕೊಲೆ ಮಾಡಿರುವ ಮೂವರು ಕಾಮುಕರನ್ನು ಬುಲಂದ್ಯಹರ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಗ್ರೇಟರ್ ನೋಯ್ಡಾದಿಂದ ಇಬ್ಬರು ಮಹಿಳೆಯರನ್ನು ಉದ್ಯೋಗದ ಭರವಸೆಯ ಮೇಲೆ ಕರೆದೊಯ್ದು ಲಕ್ನೋಗೆ ಬಿಟ್ಟಿದ್ದರು ಎನ್ನಲಾಗಿದೆ.
ಗ್ರೇಟರ್ ನೋಯ್ಡಾ ನಿವಾಸಿಗಳಾದ ಸಂದೀಪ್ ಮತ್ತು ಅಮಿತ್ ಮತ್ತು ಗಾಜಿಯಾಬಾದ್ ನಿವಾಸಿ ಗೌರವ್ ಎಂದು ಗುರುತಿಸಲಾದ ಪುರುಷರು ಬಿಯರ್ ಖರೀದಿಸಿ ಕಾರಿನಲ್ಲಿ ಕುಡಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕುಡಿದ ಮತ್ತಿನಲ್ಲಿ ಇಬ್ಬರನ್ನು ಕಾರಿನಲ್ಲಿ ಹತ್ತಿಸಿಕೊಂಡ ಕಾಮುಕರು ಮೀರತ್ ಜಿಲ್ಲೆಯಲ್ಲಿ ಒಬ್ಬ ಮಹಿಳೆಯನ್ನು ಕಾರಿನಿಂದ ಹೊರಗೆ ತಳ್ಳಿದ್ದರು. ಕೆಳಗೆ ಬಿದ್ದ ರಭಸಕ್ಕೆ ಆಕೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ ಇನ್ನೂ ಇದ್ದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಆದರೆ ಮೀರತ್‍ನಿಂದ 100 ಕಿಲೋಮೀಟರ್ ದೂರದಲ್ಲಿರುವ ಬುಲಂದ್ಶಹರ್ ಜಿಲ್ಲೆಯ ಖುರ್ಜಾ ಬಳಿ ಆಕೆ ಕಾಮುಕರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆ ನೀಡಿದ ದೂರಿನ ಆಧಾರದ ಮೇರೆಗೆ ಕೀಯಾ ಕಾರಿನಲ್ಲಿದ್ದ ಮೂವರು ಕಾಮುಕರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತನಿಖೆಯನ್ನು ಪೂರ್ಣಗೊಳಿಸಿದ್ದೇವೆ. ನ್ಯಾಯಾಲಯವು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ನಿಟ್ಟಿನಲ್ಲಿ ನಾವು ಎಲ್ಲಾ ಪ್ರಯತ್ನವನ್ನು ಮಾಡಿದ್ದೇವೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

Tags:
error: Content is protected !!