ಲಖನೌ : ನಿರ್ಭಯ ಪ್ರಕರಣದ ಮಾದರಿಯಲ್ಲೇ ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆಯ ಜೊತೆಗಿದ್ದ ಸ್ನೇಹಿತೆಯನ್ನು ಕೆಳಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ ಬುಲಂದ್‌ಧಹರ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆಯ ಸ್ನೇಹಿತೆಯನ್ನು ಕೊಲೆ ಮಾಡಿರುವ ಮೂವರು ಕಾಮುಕರನ್ನು ಬುಲಂದ್ಯಹರ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು ಗ್ರೇಟರ್ ನೋಯ್ಡಾದಿಂದ ಇಬ್ಬರು ಮಹಿಳೆಯರನ್ನು ಉದ್ಯೋಗದ ಭರವಸೆಯ ಮೇಲೆ ಕರೆದೊಯ್ದು ಲಕ್ನೋಗೆ ಬಿಟ್ಟಿದ್ದರು ಎನ್ನಲಾಗಿದೆ.
ಗ್ರೇಟರ್ ನೋಯ್ಡಾ ನಿವಾಸಿಗಳಾದ ಸಂದೀಪ್ ಮತ್ತು ಅಮಿತ್ ಮತ್ತು ಗಾಜಿಯಾಬಾದ್ ನಿವಾಸಿ ಗೌರವ್ ಎಂದು ಗುರುತಿಸಲಾದ ಪುರುಷರು ಬಿಯರ್ ಖರೀದಿಸಿ ಕಾರಿನಲ್ಲಿ ಕುಡಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಇಬ್ಬರನ್ನು ಕಾರಿನಲ್ಲಿ ಹತ್ತಿಸಿಕೊಂಡ ಕಾಮುಕರು ಮೀರತ್ ಜಿಲ್ಲೆಯಲ್ಲಿ ಒಬ್ಬ ಮಹಿಳೆಯನ್ನು ಕಾರಿನಿಂದ ಹೊರಗೆ ತಳ್ಳಿದ್ದರು. ಕೆಳಗೆ ಬಿದ್ದ ರಭಸಕ್ಕೆ ಆಕೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿ ಇನ್ನೂ ಇದ್ದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಆದರೆ ಮೀರತ್‍ನಿಂದ 100 ಕಿಲೋಮೀಟರ್ ದೂರದಲ್ಲಿರುವ ಬುಲಂದ್ಶಹರ್ ಜಿಲ್ಲೆಯ ಖುರ್ಜಾ ಬಳಿ ಆಕೆ ಕಾಮುಕರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆ ನೀಡಿದ ದೂರಿನ ಆಧಾರದ ಮೇರೆಗೆ ಕೀಯಾ ಕಾರಿನಲ್ಲಿದ್ದ ಮೂವರು ಕಾಮುಕರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ತನಿಖೆಯನ್ನು ಪೂರ್ಣಗೊಳಿಸಿದ್ದೇವೆ. ನ್ಯಾಯಾಲಯವು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ನಿಟ್ಟಿನಲ್ಲಿ ನಾವು ಎಲ್ಲಾ ಪ್ರಯತ್ನವನ್ನು ಮಾಡಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…