ದೇಶ- ವಿದೇಶ

ಸೇನಾ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಲೆಫ್ಟಿನೆಂಟ್ ಜನರಲ್‌ ಉಪೇಂದ್ರ ದ್ವಿವೇದಿ

ನವದೆಹಲಿ: ಲೆಫ್ಟಿನೆಂಟ್‌ ಜನರಲ್‌ ಉಪೇಂದ್ರ ದ್ವಿವೇದಿ ಇಂದು(ಜೂ.30)ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಅಧಿಕಾರಿ ವಹಿಸಿಕೊಂಡರು.

ಜನರಲ್‌ ಮನೋಜ್‌ ಪಾಂಡೆಯವರು ಇಂದು(ಜೂ.30) ನಿವೃತ್ತರಾಗಲಿದ್ದು, ಸೇವಾ ಹಿರಿತನ ಆಧರಿಸಿ ಉಪೆಂದ್ರ ದ್ವಿವೇದಿಯವರನ್ನು ಸೇನಾ ಮುಖ್ಯಸ್ಥರನ್ನಾಗಿ ರಕ್ಷಣಾ ಸಚಿವಾಲಯ ನೇಮಿಸಿದೆ.

ಸೇನಾಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ದ್ವಿವೇದಿ ಅವರು, ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಅಪಾರ ಕಾರ್ಯಾಚರಣೆಯ ಅನುಭವ ಹೊಂದಿದ್ದಾರೆ. 2022-2024 ರವರೆಗೆ ಉತ್ತರ ಕಮಾಂಡ್‌ನ ಜನರಲ್‌ ಆಫೀಸರ್‌ ಕಮಾಂಡಿಂಗ್‌ ಇನ್-ಚೀಫ್‌ ಆಗಿಯೂ ಸಹ ಸೇವೆ ಸಲ್ಲಿಸಿದ್ದಾರೆ.

ಹೆಚ್ಚುವರಿಯಾಗಿ ಐಜಿಎಆರ್‌ ಮತ್ತು ಅಸ್ಸಾಂ ರೈಫಲ್ಸ್‌ನ ಸೆಕ್ಟರ್‌ ಕಮಾಂಡರ್‌ ಆಗಿ ತೀವ್ರವಾದ ಭಯೋತ್ಪಾದನಾ ನಿಗ್ರಹ ಕಾರ್ಯಚರಣೆಗಳ ಸಮಯದಲ್ಲಿ ಸೇವೆ ಸಲ್ಲಿಸಿ, ಈಶಾನ್ಯದಲ್ಲಿಯೂ ವಿವಿಧ ಕಮಾಂಡ್‌ ಸ್ಥಾನಗಳನ್ನು ಹೊಂದಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

10 mins ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

14 mins ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

21 mins ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

29 mins ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

34 mins ago