ನವದೆಹಲಿ: ಅಬಕಾರಿ ನೀತಿ ಹಗರಣದ ವರದಿಗೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಜೊತೆ ಗದ್ದಲ ಉಂಟಾದ ಹಿನ್ನಲೆಯಲ್ಲಿ ಎಎಪಿ ಪಕ್ಷದ 15 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಎಎಪಿ ಪಕ್ಷದ ಹಿರಿಯ ನಾಯಕ ಗೋಪಾಲ್ ರೈ ಅವರನ್ನು ಕೂಡ ಅಮಾನತು ಮಾಡಲಾಗಿದೆ.
ಸಿಎಂ ಅವರ ಕಚೇರಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಛಾಯಾಚಿತ್ರಗಳನ್ನು ತೆಗೆದುಹಾಕಿರುವುದನ್ನು ಖಂಡಿಸಿ ವಿಧಾನಸಭೆಯಲ್ಲಿ ಎಎಪಿ ಸದಸ್ಯರು ಪ್ರತಿಭಟನೆ ನಡೆಸಿದರು. ಈ ಛಾಯಾಚಿತ್ರಗಳನ್ನು ತೆಗೆದು ಹಾಕಿ ಪ್ರಧಾನಿ ಮೋದಿ ಅವರ ಪೋಟೋವನ್ನು ಹಾಕಲಾಗಿದೆ ಎಂದು ಎಎಪಿ ಆರೋಪಿಸಿದೆ.
ಎಎಪಿ ವರದಿಯಲ್ಲಿ ಹಲವು ಭ್ರಷ್ಟಚಾರಗಳು ನಡೆದಿವೆ ಎಂದು ಸಿಎಂ ರೇಖಾ ಗುಪ್ತ ಅವರು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿದರು.
ಈ ಹೇಳಿಕೆಗಳನ್ನು ಬಿಜೆಪಿ ತಳ್ಳಿಹಾಕಿದ್ದು, ಎಎಪಿ ಆಡಳಿತದ ಅವಧಿಯಲ್ಲಿ ಮುಖ್ಯಮಂತ್ರಿಗಳ ಮೇಜಿನ ಹಿಂದೆ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳನ್ನು ಪಕ್ಕದ ಗೋಡೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಸಿಎಂ ಕಚೇರಿಯ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.
ಕೊಪ್ಪಳ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.…
ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ…
ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ…
ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ…
ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ…
ಡಿ.ವಿ.ರಾಜಶೇಖರ ಪಾಕಿಸ್ತಾನದ ಜಾಫರ್ ಎಕ್ಸ್‌ಪ್ರೆಸ್ ರೈಲು ಅಪಹರಣ ಮಾಡಿದ್ದ ಬಲೂಚಿ ಪ್ರತ್ಯೇಕತಾವಾದಿಗಳನ್ನು (ಬಲೂಚಿಸ್ತಾನ್ ಲಿಬರೇಷನ್ ಆರ್ಮಿ-ಬಿಎಲ್‌ಎ) ಕೊಲ್ಲುವಲ್ಲಿ ಪಾಕಿಸ್ತಾನ ಸೇನೆ…