ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) ಅಭ್ಯರ್ಥಿಗಳು ನಾಗರೀಕ ಸೇವಾ ಪೂರ್ವಭಾವಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವಾಗ ವಯಸ್ಸು ದೃಢಪಡಿಸುವ ಹಾಗೂ ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ಅರ್ಜಿ ಸಲ್ಲಿಸಬೇಕು ಎಂದು ಕೇಂದ್ರ ಸರ್ಕಾರ ಅದೇಶ ಹೊರಡಿಸಿದೆ.
ಈ ಮುಂಚೆ ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಅವಕಾಶ ನೀಡಲಾಗುತ್ತಿತ್ತು. ಆದರೆ ಈ ವರ್ಷದಿಂದ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿಯೇ ವಯಸ್ಸು ದೃಢಪಡಿಸುವ ಹಾಗೂ ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು ಎಂದು ಕೇಂದ್ರ ಸರ್ಕಾರ ನಿಯಮಗಳಲ್ಲಿ ಬದಲಾವಣೆ ತಂದಿದೆ.
ಇತ್ತೀಚೆಗೆ ಮಾಜಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ನಕಲಿ ದಾಖಲೆಗಳನ್ನು ನೀಡಿದ್ದ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಈ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಹೀಗಾಗಿ ಯುಪಿಎಸ್‌ಸಿ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿ ನಮೂನೆಯೊಂದಿಗೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ಅಗತ್ಯ ದಾಖಲೆಗಳನ್ನು ಒದಗಿಸಲು ವಿಫಲವಾದರೆ ಅಂತಹ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಜನವರಿ.22 ರಂದು ಹೊರಡಿಸಿರುವ ನಾಗರೀಕ ಸೇವಾ ಪರೀಕ್ಷೆಗಳ ನಿಯಮ-2025ರಲ್ಲಿ ತಿಳಿಸಿದೆ.
ಇನ್ನೂ ಕೇಂದ್ರ ಲೋಕಸೇವಾ ಆಯೋಗವೂ 2025ನೇ ಸಾಲಿನ ನಾಗರೀಕ ಸೇವಾ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದ್ದು, ಪೂರ್ವಭಾವಿ ಪರೀಕ್ಷೆಯು ಮೇ.25 ರಂದು ನಡೆಯಲಿದೆ. ಈ ವರ್ಷ ಕೇಂದ್ರ ಲೋಕಸೇವಾ ಆಯೋಗ ಒಟ್ಟು 979 ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದೆ. ಹೀಗಾಗಿ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು http://upsconline.gov.in ಈ ವೆಬ್‌ಸೈಟ್ ಮೂಲಕ 2025 ಫೆಬ್ರವರಿ 11ರ ಸಂಜೆ 6 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…