ಏಕತಾನಗರ(ಗುಜರಾತ್): ದೇಶವು ಅಭಿವೃದ್ದಿಯಾಗುವುದನ್ನು ಸಹಿಸದ ಕೆಲವು ಬಾಹ್ಯ ಹಾಗೂ ಆಂತರಿಕ ಶಕ್ತಿಗಳು, ಪ್ರಪಂಚದಾದ್ಯಂತ ದೇಶದ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಗುಜರಾತ್ ಜಿಲ್ಲೆಯ ಏಕತಾನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಅಂಗವಾಗಿ ಏಕತಾ ಪ್ರತಿಮೆಗೆ ಪುಷ್ಪಾರ್ಚಣೆ ಮಾಡಿ ನಂತರ ನೆರೆದಿದ್ದ ಜನರನ್ನು ಉದ್ಧೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಕಾಡು ನಕ್ಸಲಿಸಂ ಕೊನೆಯಾಗಿತ್ತಿದೆ, ಆದರೆ ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ನಗರಗಳಲ್ಲಿ ಹೊಸ ರೀತಿಯ ನಕ್ಸಲರು ಹುಟ್ಟಿಕೊಂಡಿದ್ದಾರೆ. ಇವರು, ನೀವು ಒಟ್ಟಾಗಿ ಇದ್ದಾರೆ ನೀವು ಸುರಕ್ಷಿತವಾಗಿರುತ್ತೀರಿ ಎನ್ನುವ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ. ಇಂತಹ ನಕ್ಸಲರನ್ನು ದೇಶವು ಗುರುತಿಸಿ ಬಯಲಿಗೆಳೆಯಬೇಕಿದೆ. ಭಾರತ ದೇಶವು ಅಭಿವೃದ್ಧಿ ಹೊಂದುತ್ತಿರುವುದನ್ನು ಸಹಿಸದ ಕೆಲವು ಬಾಹ್ಯ ಶಕ್ತಿಗಳು ಜಾತಿ ಆಧಾರದಲ್ಲಿ ದೇಶವನ್ನು ಒಡೆಯುತ್ತಿದ್ದಾರೆ ಅಂತಹವರನ್ನು ಗುರುತಿಸಿ ನಾಶ ಮಾಡಬೇಕು ಎಂದು ಹೇಳಿದರು.
560 ಕ್ಕೂ ಹೆಚ್ಚು ಸಂಸ್ಥಾನಗಳಾಗಿದ್ದ ಭಾರತವನ್ನು ಒಂದುಗೂಡಿಸುವ ಮೂಲಕ ಭಾರತವನ್ನು ಏಕೀಕರಣಗೊಳಿಸಿದ ಸರ್ದಾರ್ ಪಟೇಲ್ ಬಗ್ಗೆ ಸಂಶಯ ವ್ಯಕ್ತಪಡಿಸಿದ ಜನರಿದ್ದರೂ ಎಂದ ಮೋದಿ, ಮುಂದಿನ 2 ವರ್ಷಗಳ ಕಾಲ ದೇಶವು ಪಟೇಲ್ ಅವರ 150ನೇ ಜಯಂತಿಯನ್ನು ಆಚರಿಸಲಿದೆ ಎಂದರು.
ಪ್ರಜಾಪ್ರಭುತ್ವವನ್ನು ಬಲಪಡಿಸುವ ʼಒಂದು ರಾಷ್ಟ್ರ, ಒಂದು ಚುನಾವಣೆʼ ಉಪಕ್ರಮವನನು ಜಾರಿಗೆ ತರಲು ನಾವು ಪ್ರಯತ್ನಿಸುತ್ತಿದ್ದೇವೆ. ಇದು ನಮ್ಮ ದೇಶನ್ನು ಬಲಪಡಿಸಲಿದೆ ಎಂದು ಹೇಳಿದರು.
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…