ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್ ನಿಯೋಗ ಶುಕ್ರವಾರ ರಾತ್ರಿ ಬಂದಿಳಿದಿದೆ. ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗವೂ ಇಂದು ಸಂಜೆ ವೇಳೆಗೆ ಇಸ್ಲಾಮಾಬಾದ್‌ಗೆ ತಲುಪುವ ನಿರೀಕ್ಷೆಯಿದೆ.
ಈ ಹಿನ್ನೆಲೆ ಇಸ್ಲಾಮಾಬಾದ್‌ನಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಇರಾನ್ ನಿಯೋಗ ಪಾಕ್ ವಾಯುನೆಲೆಗೆ ಬರುತ್ತಿದ್ದಂತೆ ಪಾಕ್ ಸೇನೆ ಎಸ್ಕಾರ್ಟ್ ಮಾಡಿ, ಭದ್ರತೆ ನೀಡಿದೆ.
ಇರಾನ್ ನಿಯೋಗದ ನಾಯಕತ್ವವನ್ನು ಸಂಸತ್ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ಮತ್ತು ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ವಹಿಸಿದ್ದಾರೆ. ಪಾಕ್ ವಿದೇಶಾಂಗ ಸಚಿವ ಇಷಾಕ್ ದಾರ್, ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಸರ್ದಾರ್ ಅಯಾಜ್ ಸಾದಿಕ್, ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಸೇರಿದಂತೆ ಹಿರಿಯ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ನಿಯೋಗವನ್ನು ಸ್ವಾಗತಿಸಿವೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಹೇಳಿವೆ.
ಮಾತುಕತೆ ಸಕಾರಾತ್ಮಕವಾಗಿರುತ್ತದೆ ಎಂದು ಭಾವಿಸುತ್ತೇನೆ. ಇರಾನ್ ಉತ್ತಮ ನಂಬಿಕೆಯಿಂದ ಮುಂದುವರಿದರೆ ನಾವು ಸ್ವಾಗತಿಸುತ್ತೇವೆ. ಆದರೆ ಅಮೆರಿಕದ ಜೊತೆ ಆಟವಾಡಿದರೆ ಸುಮ್ಮನಿರುವುದಿಲ್ಲ ಎಂದು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದ್ದಾರೆ.
ಲೆಬನಾನ್ ಮೇಲಿನ ದಾಳಿಯನ್ನು ಖಂಡಿಸಿರುವ ಇರಾನ್ ಹಿನ್ನೆಲೆಯಲ್ಲಿ ಮಾತುಕತೆಗೆ ಭಾಗವಹಿಸುವುದಿಲ್ಲ ಎಂದು ಇವಾಗಲೂ ಹೇಳುತ್ತಿದೆ. ಇದರ ಹೊರತಾಗಿ ನಿಯೋಗ ಬಂದಿಳಿದಿರುವುದು ಗಮನಾರ್ಹ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…