ದೇಶ- ವಿದೇಶ

ಅಮೆರಿಕ-ಇರಾನ್‌ ಕದನ ವಿರಾಮ | ಶಾಂತಿ ಮಾತುಕತೆಗೆ ಪಾಕ್‌ಗೆ ಬಂದಿಳಿದ ಇರಾನ್‌ ನಿಯೋಗ

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್ ನಿಯೋಗ ಶುಕ್ರವಾರ ರಾತ್ರಿ ಬಂದಿಳಿದಿದೆ. ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗವೂ ಇಂದು ಸಂಜೆ ವೇಳೆಗೆ ಇಸ್ಲಾಮಾಬಾದ್‌ಗೆ ತಲುಪುವ ನಿರೀಕ್ಷೆಯಿದೆ.

ಈ ಹಿನ್ನೆಲೆ ಇಸ್ಲಾಮಾಬಾದ್‌ನಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಸ್ತೆಗಳಲ್ಲಿ ವಾಹನ ಸಂಚಾರ ಬಂದ್‌ ಆಗಿದೆ. ಇರಾನ್‌ ನಿಯೋಗ ಪಾಕ್‌ ವಾಯುನೆಲೆಗೆ ಬರುತ್ತಿದ್ದಂತೆ ಪಾಕ್‌ ಸೇನೆ ಎಸ್ಕಾರ್ಟ್‌ ಮಾಡಿ, ಭದ್ರತೆ ನೀಡಿದೆ.

ಇರಾನ್ ನಿಯೋಗದ ನಾಯಕತ್ವವನ್ನು ಸಂಸತ್ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ಮತ್ತು ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ವಹಿಸಿದ್ದಾರೆ. ಪಾಕ್ ವಿದೇಶಾಂಗ ಸಚಿವ ಇಷಾಕ್ ದಾರ್, ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಸರ್ದಾರ್ ಅಯಾಜ್ ಸಾದಿಕ್, ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಸೇರಿದಂತೆ ಹಿರಿಯ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ನಿಯೋಗವನ್ನು ಸ್ವಾಗತಿಸಿವೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಹೇಳಿವೆ.

ಮಾತುಕತೆ ಸಕಾರಾತ್ಮಕವಾಗಿರುತ್ತದೆ ಎಂದು ಭಾವಿಸುತ್ತೇನೆ. ಇರಾನ್ ಉತ್ತಮ ನಂಬಿಕೆಯಿಂದ ಮುಂದುವರಿದರೆ ನಾವು ಸ್ವಾಗತಿಸುತ್ತೇವೆ. ಆದರೆ ಅಮೆರಿಕದ ಜೊತೆ ಆಟವಾಡಿದರೆ ಸುಮ್ಮನಿರುವುದಿಲ್ಲ ಎಂದು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ ಹೇಳಿದ್ದಾರೆ.

ಲೆಬನಾನ್ ಮೇಲಿನ ದಾಳಿಯನ್ನು ಖಂಡಿಸಿರುವ ಇರಾನ್‌ ಹಿನ್ನೆಲೆಯಲ್ಲಿ ಮಾತುಕತೆಗೆ ಭಾಗವಹಿಸುವುದಿಲ್ಲ ಎಂದು ಇವಾಗಲೂ ಹೇಳುತ್ತಿದೆ. ಇದರ ಹೊರತಾಗಿ ನಿಯೋಗ ಬಂದಿಳಿದಿರುವುದು ಗಮನಾರ್ಹ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago