ದೇಶ- ವಿದೇಶ

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ ‘ಪ್ರಚೋದನೆ ಇಲ್ಲದೆ’ ದಾಳಿ ನಡೆಸಿದ ಬೆನ್ನಲ್ಲೇ ಅಮೆರಿಕ ಸೇನೆ ಗುರುವಾರ ಇರಾನ್ ಬಂದರುಗಳ ಮೇಲೆ ‘ಆತ್ಮರಕ್ಷಣಾ’ ದಾಳಿ ನಡೆಸಿದೆ. ಆದರೂ ಉಭಯ ದೇಶಗಳ ನಡುವಿನ ಕದನ ವಿರಾಮ ಒಪ್ಪಂದ ಜಾರಿಯಲ್ಲಿದೆ ಎಂದು ಅಮೆರಿಕ ಅಧಿಕಾರಿಗಳು ಹೇಳಿದ್ದಾರೆ.

ಯುಎಸ್ ಸೆಂಟ್ರಲ್ ಕಮಾಂಡ್ ಪ್ರಕಾರ, ಹಾರ್ಮುಜ್ ಜಲಸಂಧಿಯ ಮೂಲಕ ಗಲ್ಫ್ ಆಫ್ ಒಮನ್‌ಗೆ ಸಾಗುತ್ತಿದ್ದ ಯುಎಸ್‌ಎಸ್ ಟ್ರಕ್ಸ್ಟನ್, ಯುಎಸ್‌ಎಸ್ ರಾಫೆಲ್ ಪೆರಾಲ್ಟಾ ಮತ್ತು ಯುಎಸ್‌ಎಸ್ ಮೇಸನ್ ಎಂಬ ಮೂರು ಗೈಡೆಡ್-ಮಿಸೈಲ್ ಡಿಸ್ಟ್ರಾಯರ್‌ಗಳ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ, ಕ್ರೂಸ್ ಕ್ಷಿಪಣಿ ಮತ್ತು ಆತ್ಮಾಹುತಿ ಡ್ರೋನ್‌ಗಳಿಂದ ದಾಳಿ ನಡೆಸಿತು. ಸಣ್ಣ ದೋಣಿಗಳೂ ದಾಳಿಯಲ್ಲಿ ಭಾಗಿಯಾಗಿದ್ದವು.

ಅಮೆರಿಕದ ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳು ಎಲ್ಲಾ ಕ್ಷಿಪಣಿ, ಡ್ರೋನ್‌ಗಳನ್ನು ಹೊಡೆದುರುಳಿಸಿದವು. ಸಣ್ಣ ದೋಣಿಗಳನ್ನು ನಾಶಪಡಿಸಲಾಯಿತು. ‘ಮೂರು ಯುದ್ಧನೌಕೆಗಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ ಇರಾನ್ ದಾಳಿಕೋರರು ಸಂಪೂರ್ಣವಾಗಿ ನಾಶವಾಗಿದ್ದಾರೆ’ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರತೀಕಾರದ ದಾಳಿ
ದಾಳಿಯ ನಂತರ ಅಮೆರಿಕ ಇರಾನ್‌ನ ಕ್ವೆಶ್ಮ್ ಬಂದರು ಮತ್ತು ಬಂದರ್ ಅಬ್ಬಾಸ್‌ನಲ್ಲಿನ ಕ್ಷಿಪಣಿ-ಡ್ರೋನ್ ಉಡಾವಣಾ ತಾಣಗಳು, ಕಮಾಂಡ್ ಕೇಂದ್ರಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಟ್ರಂಪ್ ಇದನ್ನು ‘ಪ್ರೀತಿಯ ತಿವಿತ’ ಎಂದು ಬಣ್ಣಿಸಿದ್ದಾರೆ.

ಇರಾನ್ ಆರೋಪವೇನು?
ಇರಾನ್ ಸರ್ಕಾರಿ ಮಾಧ್ಯಮಗಳ ಪ್ರಕಾರ, ಅಮೆರಿಕ ಸೇನೆ ತನ್ನ ತೈಲ ಟ್ಯಾಂಕರ್ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಯುದ್ಧನೌಕೆಗಳ ಮೇಲೆ ಕ್ಷಿಪಣಿ ಹಾರಿಸಲಾಯಿತು. ‘ಶತ್ರುಗಳ ಘಟಕಗಳು ಹಾರ್ಮುಜ್ ಜಲಸಂಧಿಯಲ್ಲಿ ಹಾನಿಗೊಳಗಾಗಿ ಹಿಮ್ಮೆಟ್ಟುವಂತಾಯಿತು’ ಎಂದು ಇರಾನ್ ಸೇನೆ ಹೇಳಿದೆ. ಆದರೆ ಅಮೆರಿಕ ಇದನ್ನು ನಿರಾಕರಿಸಿದೆ.

ಕದನ ವಿರಾಮ ಉಲ್ಲಂಘನೆಯೇ?
ಎರಡೂ ಕಡೆಯವರು ಕದನ ವಿರಾಮ ಉಲ್ಲಂಘನೆಯಾಗಿಲ್ಲ ಎಂದು ಹೇಳಿಕೊಂಡಿದ್ದಾರೆ. ‘ನಾವು ಉದ್ವಿಗ್ನತೆ ಬಯಸುವುದಿಲ್ಲ. ಆದರೆ ಅಮೆರಿಕ ಪಡೆಗಳನ್ನು ರಕ್ಷಿಸಲು ಸಿದ್ಧರಿದ್ದೇವೆ’ ಎಂದು ಸೆಂಟ್ಕಾಂ ಹೇಳಿದೆ.

ಯುಎಇ ಮೇಲೂ ದಾಳಿ
ಇದೇ ವೇಳೆ ಯುಎಇಯ ಫುಜೈರಾ ಬಂದರಿನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದ್ದು, ಮೂವರು ಭಾರತೀಯರು ಗಾಯಗೊಂಡಿದ್ದಾರೆ.

ಹಾರ್ಮುಜ್ ಬಿಕ್ಕಟ್ಟು
ಫೆಬ್ರವರಿ 28ರಿಂದ ಆರಂಭವಾದ ಅಮೆರಿಕ-ಇಸ್ರೇಲ್-ಇರಾನ್ ಯುದ್ಧದ ನಂತರ ಹಾರ್ಮುಜ್ ಜಲಸಂಧಿ ಬಹುತೇಕ ಮುಚ್ಚಿದ್ದು, ಸುಮಾರು 2,000 ಹಡಗುಗಳು ಸಿಲುಕಿವೆ. ವಿಶ್ವದ ಕಚ್ಚಾತೈಲದ ಶೇ.20ರಷ್ಟು ಇದೇ ಮಾರ್ಗದಲ್ಲಿ ಸಾಗುತ್ತದೆ. ಟ್ರಂಪ್ ‘ಪ್ರಾಜೆಕ್ಟ್ ಫ್ರೀಡಂ’ ಹೆಸರಿನಲ್ಲಿ ಹಡಗುಗಳಿಗೆ ರಕ್ಷಣೆ ನೀಡುವುದಾಗಿ ಘೋಷಿಸಿದ್ದರು.

ಸದ್ಯ ಗಲ್ಫ್‌ನಲ್ಲಿ ಉದ್ವಿಗ್ನತೆ ಮುಂದುವರಿದಿದ್ದು, ತೈಲ ಬೆಲೆ ಏರಿಕೆಯ ಆತಂಕ ಎದುರಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

14 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

15 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

16 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

22 hours ago