ದೇಶ- ವಿದೇಶ

ಡಿಜಿಟಲ್‌ ಆಯ್ತು ಈಗ ಸ್ಟೇಟಸ್‌ ಅಪ್ಲೋಡ್‌ ಸಮಸ್ಯೆ ಅನುಭವಿಸಿದ ಬಳಕೆದಾರರು

ನವದೆಹಲಿ: ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಡಿಜಿಟಲ್‌ ಪೇಮೆಂಟ್‌ ಸಮಸ್ಯೆಯಿಂದ ಕಂಗಾಲಾಗಿದ್ದ ಬಳಕೆದಾರರು,  ಸಂಜೆ ಹೊತ್ತಿಗೆ ವಾಟ್ಸಪ್‌ ಸ್ಟೇಟಸ್‌ ಸಮಸ್ಯೆ ಅನುಭವಿಸಿದ್ದಾರೆ.

ಮೆಸೇಜಿಂಗ್‌ ಪ್ಲಾಟ್‌ಫಾರ್ಮ್‌ ವಾಟ್ಸಪ್‌ನಲ್ಲಿ ವ್ಯತ್ಯಯ ಕಂಡುಬಂದಿದ್ದು, ವಾಟ್ಸಪ್‌ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಕೆಲ ಬಳಕೆದಾರರು ದೂರು ನೀಡಿದ್ದಾರೆ.

ಇಂದು ಸಂಜೆ ಮೆಟಾ-ಮಾಲೀಕತ್ವದ ಅಪ್ಲಿಕೇಶನ್‌ನಲ್ಲಿ ತಮ್ಮ ಸ್ಟೇಟಸ್‌ಗಳನ್ನು ಅಪ್‌ಲೋಡ್‌ ಮಾಡಲು ಅಥವಾ ಸಂದೇಶಗಳನ್ನು ಕಳುಹಿಸಲು ಸಮಸ್ಯೆಯಾಗುತ್ತಿದೆ ಎಂದು ಬಳಕೆದಾರರು ವರದಿ ಮಾಡಿದ್ದಾರೆ.

ಇಂದು ಸಂಜೆ 5.13ರವರೆಗೆ ವಾಟ್ಸಪ್‌ ವಿರುದ್ಧ ಕನಿಷ್ಠ 463 ದೂರುಗಳು ದಾಖಲಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಮೂಲಕ ಇಂದು ಡಿಜಿಟಲ್‌ ಪೇಮೆಂಟ್‌ ಹಾಗೂ ವಾಟ್ಸಪ್‌ ಬಳಕೆದಾರರಿಗೆ ಭಾರೀ ಸಮಸ್ಯೆ ತಂದಿಟ್ಟಿದ್ದು, ಅವರು ಅನುಭವಿಸಿದ ಸಮಸ್ಯೆಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಮ್ಮ ಪಕ್ಷದ ಹೋರಾಟದಿಂದ ಕಾಂಗ್ರೆಸ್‌ ಸರ್ಕಾರ ಬೆದರಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಮುಂದಾಗಿರುವುದು ಒಂದು ಕಪಟ ನಾಟಕ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ…

2 hours ago

ಚಾಮರಾಜನಗರ: ಬಸ್ ನಿಲ್ಲಿಸಿಲ್ಲವೆಂದು ಚಾಲಕನಿಗೆ ಮಚ್ಚಿನಿಂದ ಹಲ್ಲೆ

ಚಾಮರಾಜನಗರ: ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಚಾಲಕನ ಮೇಲೆ ವ್ಯಕ್ತಿಗಳಿಬ್ಬರು ಹಲ್ಲೆ ಮಾಡಿರುವ ಅಮಾನವೀಯ ಘಟನೆ ತಾಲ್ಲೂಕಿನ ಇರಸವಾಡಿ ಬಳಿ ನಡೆದಿದೆ‌.…

2 hours ago

ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಬಗ್ಗೆ ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದುಳಿದ ವರ್ಗಗಳ ಜಾತಿ ಜನಗಣತಿ ವರದಿಯ ಕುರಿತು ಇದೇ 17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ…

2 hours ago

ವಿಶ್ವವೇ ಒಪ್ಪಿಕೊಂಡ ನಾಯಕ ಡಾ.ಬಿ.ಆರ್.ಅಂಬೇಡ್ಕರ್: ಎನ್.ಚಲುವರಾಯಸ್ವಾಮಿ

ಮಂಡ್ಯ: ಇಡೀ ವಿಶ್ವವೇ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿರವರ ಸಾಧನೆ ಗುರುತಿಸಿ ಇಬ್ಬರೂ ವಿಶ್ವನಾಯಕರು ಎಂದು ಒಪ್ಪಿಕೊಂಡಿದೆ ಎಂದು…

2 hours ago

ಬಿಜೆಪಿಯವರನ್ನು ನೋಡಿದರೆ ನನ್ನ ಹೊಟ್ಟೆ ಉರಿಯುತ್ತೆ: ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ: ಜಾತಿಗಣತಿ ವರದಿಯಿಂದ ಸಮಾಜ ಒಡೆಯುವ ಕೆಲಸವಾಗುತ್ತಿದೆ ಎಂಬ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ…

3 hours ago

ಅಂಬೇಡ್ಕರ್‌ ಅವರನ್ನು ಪದೇ ಪದೇ ಅವಮಾನಿಸಿದ್ದೇ ಕಾಂಗ್ರೆಸ್:‌ ಪ್ರಧಾನಿ ಮೋದಿ ವಾಗ್ದಾಳಿ

ಹರಿಯಾಣ: ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಆಶಯಕ್ಕೆ ವಿರುದ್ಧವಾಗಿ ವಕ್ಫ್‌ ಕಾನೂನು ರೂಪಿಸಿದ್ದು ಕಾಂಗ್ರೆಸ್‌ ಪಕ್ಷ ಎಂದು ಪ್ರಧಾನಿ…

3 hours ago