ದೇಶ- ವಿದೇಶ

ಡಿಜಿಟಲ್‌ ಆಯ್ತು ಈಗ ಸ್ಟೇಟಸ್‌ ಅಪ್ಲೋಡ್‌ ಸಮಸ್ಯೆ ಅನುಭವಿಸಿದ ಬಳಕೆದಾರರು

ನವದೆಹಲಿ: ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಡಿಜಿಟಲ್‌ ಪೇಮೆಂಟ್‌ ಸಮಸ್ಯೆಯಿಂದ ಕಂಗಾಲಾಗಿದ್ದ ಬಳಕೆದಾರರು,  ಸಂಜೆ ಹೊತ್ತಿಗೆ ವಾಟ್ಸಪ್‌ ಸ್ಟೇಟಸ್‌ ಸಮಸ್ಯೆ ಅನುಭವಿಸಿದ್ದಾರೆ.

ಮೆಸೇಜಿಂಗ್‌ ಪ್ಲಾಟ್‌ಫಾರ್ಮ್‌ ವಾಟ್ಸಪ್‌ನಲ್ಲಿ ವ್ಯತ್ಯಯ ಕಂಡುಬಂದಿದ್ದು, ವಾಟ್ಸಪ್‌ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಕೆಲ ಬಳಕೆದಾರರು ದೂರು ನೀಡಿದ್ದಾರೆ.

ಇಂದು ಸಂಜೆ ಮೆಟಾ-ಮಾಲೀಕತ್ವದ ಅಪ್ಲಿಕೇಶನ್‌ನಲ್ಲಿ ತಮ್ಮ ಸ್ಟೇಟಸ್‌ಗಳನ್ನು ಅಪ್‌ಲೋಡ್‌ ಮಾಡಲು ಅಥವಾ ಸಂದೇಶಗಳನ್ನು ಕಳುಹಿಸಲು ಸಮಸ್ಯೆಯಾಗುತ್ತಿದೆ ಎಂದು ಬಳಕೆದಾರರು ವರದಿ ಮಾಡಿದ್ದಾರೆ.

ಇಂದು ಸಂಜೆ 5.13ರವರೆಗೆ ವಾಟ್ಸಪ್‌ ವಿರುದ್ಧ ಕನಿಷ್ಠ 463 ದೂರುಗಳು ದಾಖಲಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಮೂಲಕ ಇಂದು ಡಿಜಿಟಲ್‌ ಪೇಮೆಂಟ್‌ ಹಾಗೂ ವಾಟ್ಸಪ್‌ ಬಳಕೆದಾರರಿಗೆ ಭಾರೀ ಸಮಸ್ಯೆ ತಂದಿಟ್ಟಿದ್ದು, ಅವರು ಅನುಭವಿಸಿದ ಸಮಸ್ಯೆಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

4 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

4 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

5 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

6 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

6 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

9 hours ago