ಗೊಂಡಾ: ಉತ್ತರ ಪ್ರದೇಶದ ಗೊಂಡಾದ ಇಟಿಯಾ ಥೋಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಕಾಲುವೆಗೆ ಉರುಳಿ ಬಿದ್ದ ಪರಿನಾಮ 11 ಮಂದಿ ಸಾವನ್ನಪ್ಪಿದ್ದಾರೆ.
ಬೊಲೆರೋ ವಾಹನವು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದ್ದು, ಸಾವುನೋವುಗಳಿಗೆ ಕಾರಣವಾಗಿದೆ.
ವಾಹನದಲ್ಲಿ ಚಾಲಕ ಸೇರಿದಂತೆ ಒಟ್ಟು 15 ಜನರು ಪ್ರಯಾಣಿಸುತ್ತಿದ್ದರು. ಗ್ರಾಮಸ್ಥರು ಹಾಗೂ ರಕ್ಷಣಾ ತಂಡಗಳ ಸಹಾಯದಿಂದ ಮುಳುಗಿದ ವಾಹನದಿಂದ 11 ಶವಗಳನ್ನು ಹೊರತೆಗೆಯಲಾಗಿದೆ. ಇತರ ನಾಲ್ವರು ಪ್ರಯಾಣಿಕರನ್ನು ಗಂಭೀರ ಸ್ಥಿತಿಯಲ್ಲಿ ರಕ್ಷಿಸಲಾಗಿದ್ದು, ಅವರನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಸಿಎಂ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದು, ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬದವರಿಗೆ 5 ಲಕ್ಷ ರೂಗಳ ಆರ್ಥಿಕ ನೆರವು ಘೋಷಣೆ ಮಾಡಿದ್ದಾರೆ.
ಇನ್ನು ಮೃತರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.





