ಉತ್ತರ ಪ್ರದೇಶ: ಉತ್ತರ ಪ್ರದೇಶದ ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ನ 15 ಬೋಗಿಗಳು ಹಳಿತಪ್ಪಿದೆ. ದುರ್ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಚಂಡೀಗಢದಿಂದ ಬರುತ್ತಿದ್ದ ಈ ರೈಲು ಉತ್ತರ ಪ್ರದೇಶದ ಜಿಲಾಹಿ ರೈಲು ನಿಲ್ದಾಣ ಹಾಗೂ ಗೋಸಾಯಿ ದಿಹ್ವಾ ನಡುವೆ ಹಳಿ ತಪ್ಪಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ರೈಲ್ವೆ ಇಲಾಖೆ ಅಧಿಕಾರಿಗಳು ರಕ್ಷಣಾ ಕಾರ್ಯ ನಡೆಸಿದ್ದಾರೆ.
ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, 25ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ರೈಲು ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇನ್ನು ಈ ಘಟನೆಯಲ್ಲಿ ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಸಿಎಂ ಯೋಗಿ ಆದಿತ್ಯನಾಥ್ ಹಾರೈಸಿದ್ದಾರೆ ಎಂದು ಸಿಎಂ ಕಚೇರಿ ಸಿಬ್ಬಂದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.





