ಉತ್ತರ ಪ್ರದೇಶ: ಇಲ್ಲಿನ ಗುರುಗ್ರಾಮದ ಸೊಹ್ನಾದಲ್ಲಿ 18 ವರ್ಷದ ಯುವತಿಯನ್ನು ಅಪಹರಿಸಿ ಐದು ಜನರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
ಬುಧವಾರ ಮತ್ತು ಗುರುವಾರದ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದು, ಯುವತಿಯನ್ನು ಮನೆಯಿಂದ ಅಪಹರಿಸಿದ ನಂತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಕೊನೆಗೆ ಅವಳು ಪ್ರಜ್ಞೆ ತಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಅತ್ಯಾಚಾರದ ನಂತರ ಸಂತ್ರಸ್ಥೆ ಯುವತಿಯನ್ನು ಅವರ ಮನೆ ಸಮೀಪದ ಪ್ರದೇಶದಲ್ಲಿ ಎಸೆದು ಹೋಗಿದ್ದಾರೆ. ಬಳಿಕ ಈ ವಿಷಯವನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.
ಸಂತ್ರಸ್ತ ಯುವತಿ ಬೀದಿಯಲ್ಲಿ ಬಿದ್ದಿರುವುದು ಕಂಡ ನಿವಾಸಿಗಳು ಅವಳ ಕುಟುಂಬಕ್ಕೆ ಮಾಹಿತಿ ತಿಳಿಸಿದ್ದಾರೆ. ಬಳಿಕ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಐಪಿಸಿಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಶೇಷ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಿದ್ದಾರೆ.





