ದೇಶ- ವಿದೇಶ

ಉತ್ತರ ಪ್ರದೇಶ: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶ: ಇಲ್ಲಿನ ಗುರುಗ್ರಾಮದ ಸೊಹ್ನಾದಲ್ಲಿ 18 ವರ್ಷದ ಯುವತಿಯನ್ನು ಅಪಹರಿಸಿ ಐದು ಜನರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ಬುಧವಾರ ಮತ್ತು ಗುರುವಾರದ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದು, ಯುವತಿಯನ್ನು ಮನೆಯಿಂದ ಅಪಹರಿಸಿದ ನಂತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಕೊನೆಗೆ ಅವಳು ಪ್ರಜ್ಞೆ ತಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಅತ್ಯಾಚಾರದ ನಂತರ ಸಂತ್ರಸ್ಥೆ ಯುವತಿಯನ್ನು ಅವರ ಮನೆ ಸಮೀಪದ ಪ್ರದೇಶದಲ್ಲಿ ಎಸೆದು ಹೋಗಿದ್ದಾರೆ. ಬಳಿಕ ಈ ವಿಷಯವನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

ಸಂತ್ರಸ್ತ ಯುವತಿ ಬೀದಿಯಲ್ಲಿ ಬಿದ್ದಿರುವುದು ಕಂಡ ನಿವಾಸಿಗಳು ಅವಳ ಕುಟುಂಬಕ್ಕೆ ಮಾಹಿತಿ ತಿಳಿಸಿದ್ದಾರೆ. ಬಳಿಕ ಕುಟುಂಬಸ್ಥರು ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಐಪಿಸಿಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಶೇಷ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

9 mins ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

10 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

10 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

11 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

11 hours ago