Gujarat 8 dead many missing after bridge collapses
ಅಹಮದಾಬಾದ್: ವಡೋದರಾ ಸೇತುವೆ ಕುಸಿತದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಎರಡನೇ ದಿನದ ಶೋಧ ಮತ್ತು ರಕ್ಷಣಾ ಕಾರ್ಯಗಳು ಆರಂಭಗೊಂಡಿದ್ದು, ಆರು ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಡೋದರಾ ಮತ್ತು ಆನಂದ್ ನಗರಗಳನ್ನು ಸಂಪರ್ಕಿಸುವ ಮಹಿಸಾಗರ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಗಂಭೀರಾ ಸೇತುವೆಯ ಒಂದು ಭಾಗ ಬುಧವಾರ ಕುಸಿದು ಕಂಡಿದ್ದು, ವಾಹನಗಳು ನದಿಗೆ ಉರುಳಿವೆ.
ರಸ್ತೆ ಮತ್ತು ಕಟ್ಟಡ ಇಲಾಖೆಯ ಹಿರಿಯ ಅಧಿಕಾರಿಗಳ ತಂಡವು ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಸ್ಥಳಕ್ಕೆ ಆಗಮಿಸಿದೆ. ದುರಂತದ ತನಿಖೆಗೆ ಆದೇಶಿಸಿರುವುದಾಗಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಮೃತರ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…