ದೇಶ- ವಿದೇಶ

ವಡೋದರಾ ಸೇತುವೆ ದುರಂತ ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಗುಜರಾತ್:‌ ಇಲ್ಲಿನ ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಗುಜರಾತ್‌ನ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, ಇನ್ನೂ ಅನೇಕರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಸೇತುವೆ ಕುಸಿದು ಸಂಭವಿಸಿದ ಜೀವಹಾನಿ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ.

ಮೃತರ ಪ್ರತಿಯೊಬ್ಬರ ಹತ್ತಿರದ ಸಂಬಂಧಿಗಳಿಗೆ ಪಿಎಂಎನ್‌ಆರ್‌ಪಿಎಫ್‌ನಿಂದ 2 ಲಕ್ಷ ರೂ ಗಳ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ ನೀಡಲಾಗುವುದು ಎಂದು ಪೋಸ್ಟ್‌ ಮಾಡಿದ್ದಾರೆ.

ಈ ಮಧ್ಯೆ ಸೇತುವೆ ಕುಸಿತ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್‌ ದುಃಖ ವ್ಯಕ್ತಪಡಿಸಿದ್ದು, ಘಟನೆಯ ಬಗ್ಗೆ ತಕ್ಷಣವೇ ತನಿಖೆಗೆ ಆದೇಶ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

6 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

11 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

15 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

15 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

15 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

18 hours ago