Mysore
26
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರರ ದಾಳಿ: ಎರಡು ದಿನದಲ್ಲಿ 2ನೇ ಅಟ್ಯಾಕ್‌

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮುಂದುವರಿಸಿದ್ದು, ಕಥುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.

ಕಥುವಾ ಜಿಲ್ಲೆಯ ಮಚೇಡಿ ಪ್ರದೇಶದ ಜೆಂಡಾನಲ್ಲಾ ಗ್ರಾಮದ ಬಳಿ ಇಂದು ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕಳೆದ ಎರಡು ದಿನಗಳಲ್ಲಿ ಇದು ಸೇನೆಯ ಮೇಲೆ ನಡೆದ ಎರಡನೇ ದಾಳಿಯಾಗಿದೆ. ಜೊತೆಗೆ ಒಂದು ವಾರದಲ್ಲಿ ಸೇನಾ ವಾಹನವನ್ನೇ ಗುರಿಯಾಗಿಸಿ ನಡೆಸಿದ ಎರಡನೇ ದಾಳಿಯೂ ಆಗಿದೆ. ಇತ್ತೀಚೆಗೆ ಇಲ್ಲಿನ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ೬ ಭಯೋತ್ಪಾದಕರು ಮೃತಪಟ್ಟಿದ್ದರು.

ಭಾರತೀಯ ಸೇನೆಯ ವಾಹನ ತೆರಳುವ ಮಾಹಿತಿ ಪಡೆದಿದ್ದ ಉಗ್ರರು, ಯೋಜನೆ ರೂಪಿಸಿ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ಸೈನಿಕರು ಪ್ರತಿದಾಳಿ ನಡೆಸಿದ್ದಾರೆ.

ಸದ್ಯ ಸೇನಾ ವಾಹನವನ್ನು ಗುರಿಯಾಗಿಸಿ ದಾಳಿ ನಡೆಸುತ್ತಿರುವ ಉಗ್ರರಿಗೆ ಭಾರತೀಯ ಸೇನೆಯ ಯೋಧರು ತಿರುಗೇಟು ನೀಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಸುಮಾರು 2-3 ಉಗ್ರರು ಅಡಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಉಗ್ರರಿಗಾಗಿ ಶೋಧಕಾರ್ಯ ಮುಂದುವರಿದಿದೆ.

 

Tags:
error: Content is protected !!