ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮುಂದುವರಿಸಿದ್ದು, ಕಥುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಕಥುವಾ ಜಿಲ್ಲೆಯ ಮಚೇಡಿ ಪ್ರದೇಶದ ಜೆಂಡಾನಲ್ಲಾ ಗ್ರಾಮದ ಬಳಿ ಇಂದು ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಳೆದ ಎರಡು ದಿನಗಳಲ್ಲಿ ಇದು ಸೇನೆಯ ಮೇಲೆ ನಡೆದ ಎರಡನೇ ದಾಳಿಯಾಗಿದೆ. ಜೊತೆಗೆ ಒಂದು ವಾರದಲ್ಲಿ ಸೇನಾ ವಾಹನವನ್ನೇ ಗುರಿಯಾಗಿಸಿ ನಡೆಸಿದ ಎರಡನೇ ದಾಳಿಯೂ ಆಗಿದೆ. ಇತ್ತೀಚೆಗೆ ಇಲ್ಲಿನ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ೬ ಭಯೋತ್ಪಾದಕರು ಮೃತಪಟ್ಟಿದ್ದರು.
ಭಾರತೀಯ ಸೇನೆಯ ವಾಹನ ತೆರಳುವ ಮಾಹಿತಿ ಪಡೆದಿದ್ದ ಉಗ್ರರು, ಯೋಜನೆ ರೂಪಿಸಿ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ಸೈನಿಕರು ಪ್ರತಿದಾಳಿ ನಡೆಸಿದ್ದಾರೆ.
ಸದ್ಯ ಸೇನಾ ವಾಹನವನ್ನು ಗುರಿಯಾಗಿಸಿ ದಾಳಿ ನಡೆಸುತ್ತಿರುವ ಉಗ್ರರಿಗೆ ಭಾರತೀಯ ಸೇನೆಯ ಯೋಧರು ತಿರುಗೇಟು ನೀಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಸುಮಾರು 2-3 ಉಗ್ರರು ಅಡಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಉಗ್ರರಿಗಾಗಿ ಶೋಧಕಾರ್ಯ ಮುಂದುವರಿದಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…